ಬೆಂಗಳೂರು:ಕಳೆದ ತಿಂಗಳಷ್ಟೇ ಪ್ರಾರಂಭವಾಗಿದ್ದ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ ಈಗ ಮುಕ್ತಾಯದ ಹಂತಕ್ಕೆ ಬಂದಿದೆ. ಈ ವಾರಾಂತ್ಯ ಕಾರ್ಯಕ್ರಮ ಮುಕ್ತಾಯವಾಗಲಿದ್ದು, ಒಂದು ವಾರದ ಗ್ಯಾಪ್​ನ ನಂತರ, ಅಂದರೆ ಸೆ. 25ರಿಂದ ‘ಬಿಗ್ ಬಾಸ್’ನ ಒಂಬತ್ತನೇ ಸೀಸನ್ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ.
ಸದ್ಯ ಪ್ರಸಾರವಾಗುತ್ತಿರುವ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ ವೂಟ್ ಸೆಲೆಕ್ಟ್​ನಲ್ಲಿ 24 ತಾಸುಗಳ ಕಾಲ ಪ್ರಸಾರವಾಗುತ್ತಿದೆ. ಇನ್ನು, ವಾರಾಂತ್ಯದ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುತ್ತಿದ್ದಾರೆ. ಈ ಬಾರಿ ಬೇರೆಬೇರೆ ಕ್ಷೇತ್ರಗಳ ಸೆಲೆಬ್ರಿಟಿಗಳ ಜತೆಗೆ ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿರುವ ಸೋನು ಶ್ರೀನಿವಾಸ ಗೌಡ, ಸ್ಪೂರ್ತಿ ಗೌಡ, ಕಿರಣ್ ಯೋಗೇಶ್ವರ್, ಲೋಕೇಶ್, ಉದಯ್ ಸೂರ್ಯ, ಅಕ್ಷತಾ ಕುಕ್ಕಿ, ಜಶ್ವಂತ್-ನಂದು ಮತ್ತು ಜಯಶ್ರೀ ಆರಾಧ್ಯ ಸ್ಪರ್ಧಿಗಳಾಗಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ಪೈಕಿ ಕೆಲವರು ‘ಬಿಗ್ ಬಾಸ್’ನ 9ನೇ ಸೀಸನ್​ನಲ್ಲೂ ಭಾಗವಹಿಸುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳ ಸೆಲೆಬ್ರಿಟಿಗಳ ಜತೆಗೆ ಇದುವರೆಗೂ ನಡೆದ ಎಂಟು ಸೀಸನ್​ಗಳಲ್ಲಿ ಭಾಗವಹಿಸಿದ್ದ ಕೆಲವು ಪ್ರಮುಖ ಸ್ಪರ್ಧಿಗಳು ಸಹ ಈ ಹೊಸ ಸೀಸನ್​ನಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಇವರ ಜತೆಗೆ ಈ ಬಾರಿ ಇನ್ನೊಂದಿಷ್ಟು ಹೊಸ ಸ್ಪರ್ಧಿಗಳು ಸೇರಿಕೊಳ್ಳಲಿದ್ದಾರೆ. ಒಟ್ಟಾರೆ ‘ಬಿಗ್ ಬಾಸ್- 9’, ಹಳಬರು ಮತ್ತು ಹೊಸಬರ ಸಮ್ಮಿಲನವಾಗಲಿದೆ.
ಸದ್ಯ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಯಾರ್ಯಾರು ಭಾಗವಹಿಸಬಹುದು ಎಂಬ ಚರ್ಚೆ ಈಗಾಗಲೇ ಶುರುವಾಗಿದೆ. ಈ ಪೈಕಿ, ಇತ್ತೀಚೆಷ್ಟೇ ‘ಜೊತೆಜೊತೆಯಲಿ’ ಧಾರಾವಾಹಿಯಿಂದ ಹೊರಬಂದ ನಟ ಅನಿರುದ್ಧ, ‘ಕಮಲಿ’ ಧಾರಾವಾಹಿಯ ಅಮೂಲ್ಯ ಓಂಕಾರ್ ಗೌಡ ಮುಂತಾದವರು ಹೆಸರುಗಳು ಕೇಳಿಬರುತ್ತಿದೆ. ‘ಬಿಗ್ ಬಾಸ್ – 9’ರ ವಾರಾಂತ್ಯದ ಕಾರ್ಯಕ್ರಮವನ್ನು ಸುದೀಪ್ ಎಂದಿನಂತೆ ನಡೆಸಿಕೊಡಲಿದ್ದಾರೆ.
ನಾನು ಬಿಗ್​ಬಾಸ್​ಗೆ ಹೋಗ್ತಿಲ್ಲ: ನಟ ಅನಿರುದ್ಧ್​

ಅಪ್ರಾಪ್ತನಿಗೆ ಬಲವಂತವಾಗಿ ಶಸ್ತ್ರಚಿಕಿತ್ಸೆ ನಡೆಸಿ ಲಿಂಗಪರಿವರ್ತನೆ: ವೈದ್ಯೆ ವಿರುದ್ಧದ ಕೇಸ್​ ರದ್ದು ಮಾಡಲು ಹೈಕೋರ್ಟ್​ ನಕಾರ

ಸಾವಿನ ಮನೆಯಲ್ಲಿ ಭಯ ಹುಟ್ಟಿಸಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಬುಡಬುಡುಕೆ! ಹಾಡಹಗಲೇ ಬೆಂಗಳೂರಲ್ಲಿ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
