ಶಿವಮೊಗ್ಗ:ನ್ಯಾಮತಿ ತಾಲೂಕಿನ ಸವಳಂಗ- ಶಿವಮೊಗ್ಗ ರಸ್ತೆಯ ಅಬ್ಬಲಗೆರೆ ಬಳಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ಪಟ್ಟಣದ ರಾಮ್​ಕುಮಾರ್(22) ಮತ್ತು ಕೆಂಚಿಕೊಪ್ಪದ ಮಲ್ಲಿಕಾರ್ಜುನ(30) ಮೃತರು. ಇವರಿಬ್ಬರು ಅಬ್ಬಲಗೆರೆ ಸಮೀಪದ ಐಪಿಎಲ್ ಕಾರ್ಖಾನೆಗೆ ಕೆಲಸಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದವರು. ಈ ವೇಳೆ ಮಳೆ ಸುರಿಯುತ್ತಿದ್ದ ಪರಿಣಾಮ ಸವಾರನ ನಿಯಂತ್ರಣ ತಪ್ಪಿದ ಬೈಕ್​, ಲಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಎಸಿಬಿ ರಚನೆಯನ್ನೇ ರದ್ದುಪಡಿಸಿದ ಹೈಕೋರ್ಟ್: ಎಲ್ಲ ಕೇಸು ಲೋಕಾಯುಕ್ತಕ್ಕೆ ವರ್ಗಾಯಿಸಲು ಆದೇಶ

ಕ್ರೈಸ್ಟ್ ಕಾಲೇಜಿನ 7 ವಿದ್ಯಾರ್ಥಿಗಳ ಹುಚ್ಚಾಟ: ಕೆರೆಗೆ ಕಾರು ಪಲ್ಟಿ

ತನಿಖೆಯಲ್ಲಿ ದಕ್ಷತೆ ಮೆರೆದ ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆಯ ಪದಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 7 =
Remember me
