ಬೆಂಗಳೂರು:ಮಾಡೆಲಿಂಗ್​ ಕೆಲಸದ ಆಮಿಷವೊಡ್ಡಿ ಯುವತಿಯನ್ನ ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಆಕೆಗೆ ಗನ್​ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಯುವತಿಯ ನಗ್ನ ಫೋಟೋಗಳನ್ನು ತೆಗೆದು ಜಾಲತಾಣದಲ್ಲಿ ಅಪ್ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷ ಅತ್ಯಾಚಾರ ಆರೋಪಿ. ಈತನಿಗೆ ಫೇಸ್​ಬುಕ್​ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್​ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್​ ನಂಬರ್​ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಅಲ್ಲದೆ ಲಾಕ್​ಡೌನ್​ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್​ ವಿತರಣೆ ಮಾಡುತ್ತಿರುವ ಫೋಟೋಗಳನ್ನೂ ಆಕೆಗೆ ವಾಟ್ಸ್​ಆ್ಯಪ್​ ಮೂಲಕ ಕಳಿಸಿ ತಾನೊಬ್ಬ ಸಭ್ಯಸ್ಥ, ಪರೋಪಕಾರಿ ಎಂದೂ ವಿಶ್ವಾಸ ಗಿಟ್ಟಿಸಿಕೊಂಡಿದ್ದನಂತೆ.
ಕೆಲಸ ಕೊಡಿಸುವೆ, ಮಾತನಾಡಬೇಕಿದೆ ನನ್ನ ಮನೆಗೆ ಬಾ ಎಂದು ತನ್ನ ಚಾಲಕನ ಮೂಲಕ ಓಲಾಕ್ಯಾಬ್ ಬುಕ್ ಮಾಡಿಸಿ ಶಾನಭೋಗನಹಳ್ಳಿಯ ತನ್ನ ಮನೆಗೆ ಯುವತಿಯನ್ನ ಅಹಮದ್ ಪಾಷ ಸೋಮವಾರ ಕರೆಸಿಕೊಂಡಿದ್ದ. ಮನೆಗೆ ಬಂದ ಯುವತಿ ಮೇಲೆ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಇದಕ್ಕೆ ವಿರೋಧಿಸಿದ ಯುವತಿಗೆ ಗನ್​ ತೋರಿಸಿ ಬೆದರಿಸಿದ್ದಾನೆ. ಅಲ್ಲದೆ, ಆಕೆಯ ನಗ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿಯೂ ಹೆದರಿಸಿದ್ದಾನೆ ಎಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.
ರಿಯಲ್ ಎಸ್ಟೇಟ್ ಬಿಜಿನೆಸ್ ಮಾಡುತ್ತಿದ್ದ ಅಹಮದ್ ಪಾಷ, ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಯುವಕನೊಂದಿಗೆ ವಿವಾಹಿತೆಯ ಕಾಮದಾಟಕ್ಕೆ ತಾಯಿ ಸಾಥ್​: ಮುಂದಾಗಿದ್ದು ಗ್ರಾಮವೇ ಬೆಚ್ಚಿಬೀಳೋ ಘಟನೆ

ಹಿರಿಯ ನಟಿ ಕವಿತಾರ ಮಗ ಕರೊನಾಗೆ ಬಲಿ, ಪತಿಯ ಸ್ಥಿತಿ ಗಂಭೀರ

ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 7 =
Remember me
