ಶಿವಮೊಗ್ಗ:ಬುಧವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಕಚೇರಿಯಿಂದ ಹೊರ ಬಂದ ಸಚಿವ ಕೆ.ಎಸ್​. ಈಶ್ವರಪ್ಪಗೆ ಮುತ್ತಿಗೆ ಹಾಕಲು ಕಾಂಗ್ರೆಸ್​ ಯುವ ಕಾರ್ಯಕರ್ತರು ಯತ್ನಿಸಿದ್ದು, ಈ ವೇಳೆ ಬಿಜೆಪಿ ಮುಖಂಡರು ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಕಾಂಗ್ರೆಸ್​ನವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಆತ ಡೆತ್ ನೋಟ್ ಬರೆದೇ ಇಲ್ಲ. ಆದರೂ ಡೆತ್​ನೋಟ್ ಬರೆದಿದ್ದಾನೆ ಎಂದು ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ. ಆತನಿಗೆ ಕಾಮಗಾರಿ ಟೆಂಡರ್ ಆಗಿಯೇ ಇರಲಿಲ್ಲ. ಸಂತೋಷ್ ಪಾಟೀಲ್‌ ಮುಖವನ್ನೇ ನಾನು ನೋಡಿಲ್ಲ. ಕಾಂಗ್ರೆಸ್​ನವರದ್ದು ನಿರಾಧಾರ ಆರೋಪ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಘೋಷಿಸಿ ಈಶ್ವರಪ್ಪ ಹೊರ ಬಂದರು. ಆ ವೇಳೆ ಕಚೇರಿ ಹೊರಗೆ ಜಮಾಯಿಸಿದ್ದ ಕಾಂಗ್ರೆಸ್​ ಕಾರ್ಯಕರ್ತರು ಈಶ್ವರಪ್ಪರನ್ನು ಮುತ್ತಿಗೆ ಹಾಕಲು ಯತ್ನಿಸಿದಾಗ ಪಕ್ಕದಲ್ಲೇ ಇದ್ದ ಬಿಜೆಪಿ ಕಾರ್ಯಕತರು ತಡೆದು ವಾಗ್ವಾದಕ್ಕಿಳಿದರು. ಪೊಲೀಸ್ ವಾಹನದ ಮೇಲೆ ಬಿಜೆಪಿ ಕಾರ್ಯಕರ್ತರು ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದರು.
ಸಂತೋಷ್​ ಡೆತ್​ನೋಟ್​ ಅನ್ನೇ ಬರೆದಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಈಶ್ವರಪ್ಪ

ಜ್ಯೋತಿಷಿ ಮಾತು ನಂಬಿ ಸಾವಿನ ಮನೆ ಬಿಟ್ಟು ಲಾಡ್ಜ್​ಗೆ ಹೋದ ಮಾಲೀಕನಿಗೂ-ಕುಟುಂಬಕ್ಕೂ ಕಾದಿತ್ತು ಭಾರಿ ಆಘಾತ!

ಅಯ್ಯೋ ಅಣ್ಣ… ನಾನಷ್ಟು ಗೋಗರೆದ್ರೂ ಊಟ ಮಾಡದೆ ಕೆಲ್ಸ ಇದೆ ಅಂತ ಹೊರಟ್ಯಲ್ಲೋ: ಮಡಿಲಕ್ಕಿ ಕೊಟ್ಟು ಹಿಂತಿರುಗುವಾಗ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eighteen =
Remember me
