ಬೆಂಗಳೂರು:ಮುಖ್ಯಮಂತ್ರಿ ಸ್ಥಾನ ಬದಲಾವಣೆ ವದಂತಿಯ ನಡುವೆಯೇ ಸಚಿವ ಸಿ.ಪಿ.ಯೋಗೇಶ್ವರ್​, ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಬಳಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ.
ನನ್ನ ಸಚಿವಗಿರಿಯನ್ನು ನನ್ನ ಮಗ ಚಲಾಯಿಸಿದರೆ ನಾನು ಒಪ್ಪಲ್ಲ. ನನ್ನ ಅಧಿಕಾರದಲ್ಲಿ ಬೇರೆಯವರು ಮೂಗು ತೂರಿಸೋದು ಇಷ್ಟವಿಲ್ಲ. ಆದರೆ, ರಾಜ್ಯದಲ್ಲಿ ಇದೇ‌ ನಡೆಯುತ್ತಿರುವುದು. ಇದನ್ನು ನಾನು ಸೂಕ್ಷ್ಮವಾಗಿ ಹೇಳಿದ್ದೀನಿ, ಅರ್ಥ ಮಾಡಿಕೊಳ್ಳಿ ಎನ್ನುವ ಮೂಲಕ ಬಿಎಸ್​ವೈ ಸರ್ಕಾರದಲ್ಲಿ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪರೋಕ್ಷವಾಗಿ ಆಕ್ಷೇಪಿಸಿದ ಯೋಗೇಶ್ವರ್​, ಇದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜತೆ ಹೊಂದಾಣಿಕೆ ಮಾಡ್ಕೊಂಡಿದೆ ನಮ್ಮ ಸರ್ಕಾರ ಎಂದರು.
ನಾನು ದೆಹಲಿಗೆ ಹೋಗ್ತೀನಿ, ಬರ್ತೀನಿ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಕ್ಕಾಗಲ್ಲ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ. ಮುಖ್ಯಮಂತ್ರಿ ಬದಲಾವಣೆ ನನ್ನ ಮೂಲ ಉದ್ದೇಶ ಅಲ್ಲ. ಅಷ್ಟೊಂದು ಶಕ್ತಿ ನನಗೆ ಇಲ್ಲ. ಆ ಅಭಿಪ್ರಾಯವೂ ನನಗಿಲ್ಲ. ದೆಹಲಿಗೆ ನಾನು ಭೇಟಿ ಕೊಟ್ಟ ವಿಷಯ ಏಕೆ ಇಷ್ಟೊಂದು ಸುದ್ದಿಯಾಯಿತೋ ಗೊತ್ತಿಲ್ಲ ಎಂದ ಯೋಗೇಶ್ವರ್​, ಅರವಿಂದ ಬೆಲ್ಲದ ಅವರು ದೆಹಲಿಗೆ ಏಕೆ ಹೋಗಿದ್ದರೋ ನನಗೆ ಗೊತ್ತಿಲ್ಲ. ನನ್ನ ವಿಚಾರವನ್ನ ಎಲ್ಲೆಲ್ಲಿ ಹೇಳಬೇಕೋ ಅಲ್ಲಿ ಹೇಳ್ತೀನಿ. ವರಿಷ್ಠರ ಮುಂದೆ ನನ್ನ ನೋವು ತೋಡಿಕೊಳ್ತೇನೆ. ಮಾಧ್ಯಮದ ಮುಂದೆ ಕೆಲವು ವಿಚಾರ ಹೇಳಲು ಆಗಲ್ಲ ಎಂದರು.
ಪಕ್ಷದ ಕೆಲವು ಸ್ನೇಹಿತರು ನನ್ನ ಬಗ್ಗೆ ಮಾತಾಡ್ತಿರೋದು ಗೊತ್ತು. ಅದನ್ನ ಯಾರು ಮಾತನಾಡಿಸ್ತಿದ್ದಾರೆ ಎಂದೂ ಗೊತ್ತು. ಯಾರ ಕುಮ್ಮಕ್ಕಿದೆ ಅಂತಲೂ ಗೊತ್ತು. ಇದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ. ನಾನು ಈ ಬಗ್ಗೆ ಸಿಎಂ ಬಳಿಯೂ ಹೇಳಿದ್ದೇನೆ ಎಂದ ಯೋಗೇಶ್ವರ್​, 2023ಕ್ಕೆ ನಾನು ಹೇಗೆ ಗೆಲ್ಲಬೇಕು ಅನ್ನೋ ಬಗ್ಗೆ ನೋಡ್ತಿದ್ದೇನೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ದೃಷ್ಟಿಯಲ್ಲಿ ಕೆಲಸ ಮಾಡ್ತಿದ್ದೇನೆ ಎಂದರು.
ನನ್ನ ಸಮಸ್ಯೆ ಹೇಳಿದ್ದೇನೆ ಹೊರತು ನಾಯಕತ್ವ ಬದಲಾವಣೆ ಎಂದು ನಾನು ಹೇಳ್ತಿಲ್ಲ. ನನ್ನ ಹೆಸರೇ ಏಕೆ ಪದೇಪದೆ ಕೇಳಿ ಬರ್ತಿದೆ ಅನ್ನೋದು ಗೊತ್ತಿಲ್ಲ. ನಾನು ದೆಹಲಿಗೆ ಹೋಗಿ ಬಂದ್ರೆ ಕಲರ್ ಕಲರ್ ತಿರುವು ಪಡೆದುಕೊಳ್ಳುತ್ತೆ. ನಾಯಕತ್ವ ಬದಲಾವಣೆ ಬಂದಾಗ ನಾಲ್ಕು ಗೋಡೆಗಳ ಮಧ್ಯೆ ಹೇಳ್ತೀನಿ ಎಂದರು.
ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಗರ್ಭಿಣಿ ಕಣ್ಣೀರಿಟ್ಟರೂ ಅಡ್ಮಿಟ್​ ಮಾಡಿಕೊಳ್ಳಲಿಲ್ಲ, ಆಸ್ಪತ್ರೆ ಬಾಗಿಲಲ್ಲಿ ನಿಂತಿರುವಾಗಲೇ ಹೆರಿಗೆ, ಕೆಳಗೆ ಬಿದ್ದು ಮಗು ಸಾವು!

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
