ರಾಯಚೂರು:ರಾಜ್ಯದಲ್ಲಿ ಕಾಂಗ್ರೆಸ್​ನಿಂದ ‘ಸಿದ್ದರಾಮೋತ್ಸವ’, ಬಿಜೆಪಿಯಿಂದ ‘ಜನಸ್ಪಂದನಾ ಸಮಾವೇಶ’, ಜೆಡಿಎಸ್​ನಿಂದ ‘ಜನತಾ ಮಿತ್ರ’ ನಡೆದಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್​ನಿಂದ ಭಾರತ್​ ಜೋಡೋ ಯಾತ್ರೆ ನಡೆಯುತ್ತಿದೆ. ಇದೀಗ ‘ಜನಸಂಕಲ್ಪ ಯಾತ್ರೆ’ ನಡೆಸಲು ಬಿಜೆಪಿ ಸಜ್ಜಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಿಂದ ಅ.11ರಂದು “ಬಿಜೆಪಿ ಸಂಕಲ್ಪ ಯಾತ್ರೆ” ಹೊರಡಲಿದೆ. ಯಾತ್ರೆ ನಿಮಿತ್ತ ಗ್ರಾಮದಲ್ಲಿ ಬೃಹತ್​ ಸಮಾವೇಶ ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ್​, ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ 100 ವಿಧಾನಸಭೆ ಕ್ಷೇತ್ರಗಳಲ್ಲಿ ಯಾತ್ರೆ- ಸಮಾವೇಶ ನಡೆಸಲಾಗುವುದು. ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದ ಮತ್ತೊಂದು ತಂಡ 100 ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳಲಿದೆ. ಪಕ್ಷ ಅಧಿಕಾರಕ್ಕೆ ಬಂದ ನಂತರದಲ್ಲಿ ಕೈಗೊಂಡ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಜತೆಗೆ ಪಕ್ಷದ ಸಂಘಟನೆ ಕಾರ್ಯ ಕೈಗೊಳ್ಳುವ ಮೂಲಕ ಮುಂಬರುವ ಚುನಾವಣೆಗೆ ಕಾರ್ಯಕರ್ತರನ್ನು ಸಿದ್ಧಗೊಳಿಸುವ ಕೆಲಸ ಮಾಡಲಾಗುತ್ತೆ ಎಂದರು.
ಪಕ್ಷದ ಎಲ್ಲ ಮೋರ್ಚಾಗಳಿಂದ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ. ಅ.30ರಂದು ಕಲಬುರಗಿಯಲ್ಲಿ ಒಬಿಸಿ ಸಮಾವೇಶ ಏರ್ಪಡಿಸಲಾಗುತ್ತಿದೆ. ಮೈಸೂರಿನಲ್ಲಿ ಎಸ್ಸಿ ಮೋರ್ಚಾ ಸಮಾವೇಶ, ಹುಬ್ಬಳ್ಳಿಯಲ್ಲಿ ರೈತ ಮೋರ್ಚಾ ಸಮಾವೇಶ, ಬಳ್ಳಾರಿಯಲ್ಲಿ ಎಸ್ಟಿ ಮೋರ್ಚಾ ಸಮಾವೇಶ ಆಯೋಜಿಸಲಾಗುತ್ತಿದ್ದು, 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ತುಮಕೂರಲ್ಲಿ ಡಿಕೆಶಿ-ಸಿದ್ದು ಎದುರಲ್ಲೇ ಗೊಂದಲಕ್ಕೆ ತೆರೆ ಎಳೆದ ರಾಹುಲ್​ ಗಾಂಧಿ

ನಮಗೂ ರಾಜಕೀಯ ಮಾಡೋಕೆ ಬರುತ್ತೆ… ಇಡಿ ಕಚೇರಿಯಿಂದ ಹೊರ ಬರುತ್ತಿದ್ದಂತೆ ಸಿಡಿದೆದ್ದ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − ten =
Remember me
