ದೊಡ್ಡಬಳ್ಳಾಪುರ:ರಾಜ್ಯದಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದು ಮೂರು ವರ್ಷ, ಬಸವರಾಜ ಬೊಮ್ಮಾಯಿ‌ ನೇತೃತ್ವದ ಸರ್ಕಾರಕ್ಕೆ ಒಂದು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ ಬಳಿ ಗುರುವಾರ(ಜು.28) ನಡೆಯಲಿರುವ ಸಾರ್ಥಕ ಸೇವೆ, ಸಬಲೀಕರಣಕ್ಕಾಗಿ ಬೃಹತ್ ಜನೋತ್ಸವಕ್ಕೆ ವೇದಿಕೆ ಸಜ್ಜಾಗಿದೆ.
ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವು ತಾಲೂಕುಗಳು, ಬೆಂಗಳೂರು ನಗರ ಜಿಲ್ಲೆಯ ಮೂರು ತಾಲೂಕುಗಳ ಎರಡು ಲಕ್ಷ ಜನರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಧ್ಯಾಹ್ನ 12ಕ್ಕೆ ಈ ಸಮಾವೇಶವನ್ನು ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಸಂಪುಟದ ಎಲ್ಲ ಸದಸ್ಯರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ‌ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸಲಿದ್ದಾರೆ.
ಪರಿಶೀಲನೆ:ಸಚಿವರಾದ ಡಾ.ಕೆ.ಸುಧಾಕರ್, ಎಂಟಿಬಿ ನಾಗರಾಜ, ಮುನಿರತ್ನ ಅವರು ಸಮಾವೇಶದ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಡಾ.ಸುಧಾಕರ್, ಜನರು ಮತ್ತು ಫಲಾನುಭವಿಗಳ ಒತ್ತಾಸೆ ಮೇರೆಗೆ ಆಯೋಜಿಸಿರುವ ಸಮಾವೇಶವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸಜ್ಜಾಗಿದ್ದು ಮೂರ್ನಾಲ್ಕು ಜಿಲ್ಲೆಗಳ ಎರಡು ಲಕ್ಷ ಜನರು ಭಾಗವಹಿಸಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ದುರ್ಬಲವಾಗಿದೆ ಎಂದು ಟೀಕಿಸುತ್ತಿರುವವರಿಗೆ ಈ ಸಮಾವೇಶ ಸಂದೇಶ ನೀಡಲಿದೆ ಎಂದರು.
ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮಾತನಾಡಿ, ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ತಿಳಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ದಿಗ್ವಿಜಯ ಮೆಗಾ ಸರ್ವೇ: ಯಾರಿಗೆ ‘ರಾಜ್ಯಾಧಿಕಾರ’? ಕಾಂಗ್ರೆಸ್​ ಎದುರು ಬಿಜೆಪಿ ಮಂಕು, ಕೈಗೆ ಒಲಿಯುವ ಸ್ಥಾನಗಳೆಷ್ಟು?

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 13 =
Remember me
