ಚಿಂಚೋಳಿ:ಬಿಜೆಪಿ ಹಿರಿಯ ಮುಖಂಡ ಹಾಗೂ ಆರ್​ಎಸ್​ಎಸ್​ ಕಾರ್ಯಕರ್ತ ರೇವಣಸಿದ್ದಪ್ಪ ಮಜ್ಜಗಿ(56) ಹೃದಯಾಘಾತದಿಂದ ಬುಧವಾರ ರಾತ್ರಿ ನವದೆಹಲಿಯಲ್ಲಿ ನಿಧನರಾದರು.
ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಒಂದು ಅವಧಿಗೆ ಪಕ್ಷದ ತಾಲೂಕು ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ನ್ಯಾಯಬೆಲೆ ಅಂಗಡಿಗಳ ನಷ್ಟ ಪರಿಹಾರ ಭರಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್​ ಮೋದಿ ನೇತೃತ್ವದಲ್ಲಿ ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಿಂಚೋಳಿಯ 9 ಜನರೊಂದಿಗೆ ವಿಮಾನದ ಮೂಲಕ ದೆಹಲಿಗೆ ಹೋಗಿದ್ದರು. ಹೋರಾಟದಲ್ಲಿ ಪಾಲ್ಗೊಂಡು ಗುರುವಾರ ಚಿಂಚೋಳಿಗೆ ವಾಪಸ್​ ಆಗಬೇಕಿತ್ತು. ದೆಹಲಿಯ ಲಾಡ್ಜ್​ನ ರೂಮಿನಲ್ಲಿ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.
ನೆರವಿಗೆ ಬಂದ ಡಾ.ಜಾಧವ್​:ದೆಹಲಿಯಲ್ಲಿ ಚಿಂಚೋಳಿ ಬಿಜೆಪಿ ಮುಖಂಡನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಸದ ಡಾ.ಜಾಧವ್​, ಲಾಡ್ಜ್​ಗೆ ತೆರಳಿ ಸಮರ್ಪಕ ಮಾಹಿತಿ ಪಡೆದರು. ಅಲ್ಲದೆ ಸ್ಥಳೀಯ ಆಸ್ಪತ್ರೆಗೆ ಹೋಗಿ ಮರಣೋತ್ತರ ಪರೀಕ್ಷೆಗೂ ಅನುವು ಮಾಡಿಕೊಟ್ಟಿದ್ದಾರೆ. ಹೆಲಿಕಾಪ್ಟರ್​ ಮೂಲಕ ರೇವಣಸಿದ್ದಪ್ಪ ಮೃತದೇಹ ಚಿಂಚೋಳಿಗೆ ಕರೆತರಲು ಸಹ ವ್ಯವಸ್ಥೆ ಮಾಡಿದ್ದಾರೆ.
ರೇವಣಸಿದ್ದಪ್ಪ ಮಜ್ಜಗಿ ಅವರಿಗೆ ಪತ್ನಿ, ಪುತ್ರ-ಪುತ್ರಿ ಇದ್ದಾರೆ. ಇಂದು(ಗುರುವಾರ) ಸಂಜೆ ಚಿಂಚೋಳಿಯಲ್ಲಿ ಅವರ ಜಮೀನಿನಲ್ಲೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಅಪ್ರಾಪ್ತೆಗೆ ತಾಳಿಭಾಗ್ಯ ನೀಡಲು ಯತ್ನ: ಒಮ್ಮೆ ಬಚಾವ್​ ಆಗಿದ್ದ ಪ್ರಿಯಕರ ಮತ್ತೆ ಪೊಲೀಸರ ಕೈಗೆ ಸಿಕ್ಕಿಬಿದ್ದ

ಲೈನ್‌ಮನ್‌ಗಳಾಗಿದ್ದ ತಂದೆ- ಚಿಕ್ಕಪ್ಪನ ಬಳಿಕ ಮಗನೂ ವಿದ್ಯುತ್‌ಗೆ ಬಲಿ! ಒಂದೇ ಕುಟುಂಬದ ಮೂವರು ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + fifteen =
Remember me
