ಚಿತ್ರದುರ್ಗ:ನನಗೆ 20 ವರ್ಷದ ರಾಜಕೀಯ ಅನುಭವ ಇದೆ. ಆರು ಬಾರಿ ಶಾಸಕನಾಗಿದ್ದೇನೆ. ಆದರೂ ಯಾವ ಕಾರಣಕ್ಕಾಗಿ ನನಗೆ ಸಚಿವ ಸ್ಥಾನ ಸಿಗುತ್ತಿಲ್ಲ ಎಂದು ಗೊತ್ತಾಗುತ್ತಿಲ್ಲ. ಪಕ್ಷಕ್ಕೆ ಅನೇಕ ಬಾರಿ ಹಿನ್ನಡೆ ಆದಾಗಲೂ ನನ್ನ ಕ್ಷೇತ್ರದಲ್ಲಿ ಗೆದ್ದಿದ್ದೇನೆ. ಪಕ್ಷದ ಶಿಸ್ತನ್ನು ಎಂದೂ ಉಲ್ಲಂಘಿಸಿಲ್ಲ. ಕರ್ನಾಟಕದ ಬಿಜೆಪಿ ಪಕ್ಷದಲ್ಲಿ ಸಾಮಾಜಿಕ ನ್ಯಾಯದಲ್ಲಿ ಲೋಪವಿದೆ. ನನ್ನ ಮನಸ್ಸಿಗೆ ತುಂಬಾ ನೋವಾಗಿದೆ… ಎಂದು ಬಿಜೆಪಿ ಹಿರಿಯ ಶಾಸಕ ತಿಪ್ಪಾರೆಡ್ಡಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದ್ದು, ಈ ರೇಸ್​ನಲ್ಲಿ ತಿಪ್ಪಾರೆಡ್ಡಿ ಅವರೂ ಇದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ತಿಪ್ಪಾರೆಡ್ಡಿ, ಬಿಜೆಪಿ ಸಾಮಾಜಿಕ ಪರಿಕಲ್ಪನೆವುಳ್ಳ ಪಕ್ಷ. ಆದರೆ ನಮ್ಮ ರಾಜ್ಯದಲ್ಲಿ ಎರಡು ಸಮುದಾಯಕ್ಕೆ ಸಂಪುಟ ಸೀಮಿತವಾಗಿದೆ. ಉಳಿದ ಸಮುದಾಯದವರಿಗೆ ಪಕ್ಷದಲ್ಲಿ ಅಸಮಧಾನವಿದೆ. ಉತ್ತರ ಪ್ರದೇಶದ ಯೋಗಿ ಸಂಪುಟದಲ್ಲಿ ಸಾಮಾಜಿಕ ಪರಿಕಲ್ಪನೆ ಇದೆ. ಎಲ್ಲ ಜಾತಿ, ಸಮುದಾಯದವರಿಗೂ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಸಿಎಂ ಬೊಮ್ಮಾಯಿ ಅವರು ಸಾಮಾಜಿಕ ಪರಿಕಲ್ಪನೆ ಕಾಪಾಡುತ್ತಾರೆ ಎಂಬ ನಿರೀಕ್ಷೆ ಇದೆ. ನನಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದರು.
ಸಂಪುಟ ವಿಸ್ತರಣೆ ತುಂಬಾ ತಡವಾಗಿದೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಬರುತ್ತೆ. ನೀತಿ ಸಂಹಿತೆ ಹಿನ್ನೆಲೆ ಸಂಪುಟ ವಿಸ್ತರಣೆ ತಡವಾಗುತ್ತೆ. ಇನ್ನು ಉಳಿಯುವ ಕೆಲವೇ ತಿಂಗಳಲ್ಲಿ ಜನರ ಸೇವೆ ಮಾಡೋದು ಯಾವಾಗ? ಒಮ್ಮೆ ಯಡಿಯೂರಪ್ಪ ಖಾಸಗಿ ಕಾರ್ಯಕ್ರಮಕ್ಕೆ ಬಂದಾಗ ಭರವಸೆ ನೀಡಿದ್ದರು. ನಾನು ಯಾವುದೇ ಬೇಡಿಕೆ ಇಡದಿದ್ದರೂ ಆಶ್ವಾಸನೆ ನೀಡಿದ್ರು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಇವರಿಗೆ ಅನ್ಯಾಯವಾಗಿದೆ. ಅದನ್ನು ನಾನೇ ಸರಿಪಡಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದರು. ನಾನು ಕೇವಲ ಒಂದು ಜಾತಿ ಹಿಡಿದು ಗೆದ್ದು ಬಂದಿಲ್ಲ. ಎಲ್ಲ ಪಕ್ಷದಲ್ಲೂ ನನ್ನನ್ನು ಇಷ್ಟಪಡುವವರು ಇದ್ದಾರೆ. ಆದರೂ ನನಗೆ ಮಂತ್ರಿ ಸ್ಥಾನ ಸಿಗದಿರುವುದು ನೋವು ತಂದಿದೆ ಎಂದು ತಿಪ್ಪಾರೆಡ್ಡಿ ಅಸಮಾಧಾನ ಹೊರ ಹಾಕಿದರು.
ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಸೇತುವೆ ಮೇಲಿಂದ ಪ್ರಪಾತಕ್ಕೆ ಕಾರು ಪಲ್ಟಿ: ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳು ದಾರುಣ ಸಾವು

ಗ್ರಾಪಂ ಕಚೇರಿಯಲ್ಲೇ ಪ್ರೇಮಿಗಳ ಮದುವೆ, ಪೌರೋಹಿತ್ಯ ವಹಿಸಿದ ಪಿಡಿಒ! ನಂಜನಗೂಡಲ್ಲಿ ನವಜೋಡಿ ಪ್ರಕರಣ ಸುಖಾಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 18 =
Remember me
