ಬೆಂಗಳೂರು:ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ. 11 ಸದಸ್ಯರನ್ನೊಳಗೊಂಡ ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯನ್ನು ಪುನರ್​ ರಚಿಸಲಾಗಿದ್ದು, ಈ ಸಮಿತಿಯ ಟಾಪ್​ 5ನೇ ಸ್ಥಾನದಲ್ಲಿ ಯಡಿಯೂರಪ್ಪ ಅವರ ಹೆಸರಿದೆ.
ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕೃತ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನ ಕಡೆಗಣಿಸಿಲ್ಲ ಎಂದು ಹೈಕಮಾಂಡ್​ ಸಂದೇಶ ರವಾನಿಸಿದೆ. ಯಡಿಯೂರಪ್ಪ ಅವರ ಹಿರಿತನ ಪರಿಗಣಿಸಿದ ಬಿಜೆಪಿ ಹೈಕಮಾಂಡ್, ರಾಷ್ಟ್ರಮಟ್ಟದ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಈ ಸಮಿಯಲ್ಲಿ ಜೆ.ಪಿ.ನಡ್ಡಾ, ನರೇಂದ್ರ ಮೋದಿ, ರಾಜ​ನಾಥ್​ ಸಿಂಗ್​, ಅಮಿತ್​ ಷಾ, ಯಡಿಯೂರಪ್ಪ ಸೇರಿದಂತೆ 11 ನಾಯಕರಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ನಳಿನ್ ಕುಮಾರ್​ ಕಟೀಲ್, ಕೇಂದ್ರದ ಸಂಸದೀಯ ಮಂಡಳಿ ಪುನರ್ ರಚನೆ ಆಗಿದೆ. ಕರ್ನಾಟಕದಿಂದ ಯಡಿಯೂರಪ್ಪ ಅವರಿಗೆ ಹೈಕಮಾಂಡ್​ ಉನ್ನತ ಮಟ್ಟದ ಸ್ಥಾನ ನೀಡಿದೆ. ಯಡಿಯೂರಪ್ಪ ಮತ್ತು ಜೆ.ಪಿ.ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುವೆ. ಕೇಂದ್ರದಲ್ಲಿ ನಮ್ಮ ಪರವಾಗಿ ಧ್ವನಿ ಎತ್ತಲು, ನಮ್ಮಪರ ನಿರ್ಣಯ ತೆಗೆದುಕೊಳ್ಳಲು ಯಡಿಯೂರಪ್ಪ ಅವರಿಗೆ ಅನುಕೂಲವಾಗಿದೆ ಎಂದಿದ್ದಾರೆ.
ನಿಜವಾದ ವಯಸ್ಸು ಮುಚ್ಚಿಟ್ಟು ಸುಳ್ಳು ಹೇಳಿ ಮದ್ವೆಯಾದಾಕೆ ಗಂಡನಿಂದಲೇ ದುರಂತ ಅಂತ್ಯ! ಬೆಂಗಳೂರಲ್ಲಿ ಪ್ರಕರಣ

KRS ಡ್ಯಾಂ ಮೇಲೆ ಫೋಟೋಶೂಟ್​ ಮಾಡಿಸಿದ ಸಂಸದೆ ವಿರುದ್ಧ ಶಾಸಕ ಗರಂ! ಕಾನೂನು ಎಲ್ಲರಿಗೂ ಒಂದೇ ಕ್ರಮ ಕೈಗೊಳ್ಳಿ…

ಧರ್ಮಸ್ಥಳದಲ್ಲಿ ರೂಂ ಸಿಗಲಿಲ್ಲವೆಂದು ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಭಿನ್ನಕೋಮಿನ ಜೋಡಿಗೆ ಮಾರ್ಗದಲ್ಲೇ ಕಾದಿತ್ತು ಶಾಕ್​

ನಾಗರಹಾವಿನ ಹೆಡೆಯಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿದ ತಾಯಿ! ಮಂಡ್ಯದಲ್ಲಿ ಎದೆ ಝಲ್​ ಅನ್ನಿಸೋ ಘಟನೆ, ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + ten =
Remember me
