ಬೆಂಗಳೂರು:ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರ ನಾಯಕ ರಾಹುಲ್ ಗಾಂಧಿ ಇಂದು(ಸೋಮವಾರ) ಜಾರಿ ನಿರ್ದೇಶನಾಲಯ ಮುಂದೆ ಹಾಜರಾಗಿದ್ದಾರೆ. ಅತ್ತ ಸಮನ್ಸ್​ ಜಾರಿ ಮಾಡಿದ್ದ ಇಡಿ ವಿರುದ್ಧ ದೇಶಾದ್ಯಂತ ಕಾಂಗ್ರೆಸ್​ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ಕಿಡಿಕಾರಿದೆ. ‘ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ‌ ಕುಟುಂಬ “ಅನುಕಂಪ” ಗಿಟ್ಟಿಸುವ ನಾಟಕವಾಡುತ್ತಿದೆ’ ತರಾಟೆಗೆ ತೆಗೆದುಕೊಂಡಿದೆ.
ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ ಇಡಿ ನೋಟಿಸ್ ಜಾರಿಯಾಗುತ್ತಿದ್ದಂತೆ ದೇಶಾದ್ಯಂತ ಅಶಾಂತಿ ಸೃಷ್ಟಿ ಮಾಡಲಾಗುತ್ತಿದೆ. ಇಡಿ ಕಚೇರಿ ಎದುರು ಪ್ರತಿಭಟನೆಯ ಕರೆಯ ಹಿಂದೆ ದೇಶ ವಿರೋಧಿ ಸಂಚು ಅಡಗಿದೆ. ಉತ್ತರದ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಹೋರಾಟವನ್ನು ಕಾಂಗ್ರೆಸ್ ಕರ್ನಾಟಕಕ್ಕೆ ಆಹ್ವಾನಿಸುತ್ತಿದೆ! ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ‌ ಕುಟುಂಬ “ಅನುಕಂಪ” ಗಿಟ್ಟಿಸುವ ನಾಟಕವಾಡುತ್ತಿದೆ. ತಾನು ಕಳ್ಳ ಪರರ ನಂಬೆ ಎಂಬ ಧೋರಣೆಯೇ ಕಾಂಗ್ರೆಸ್ ಅಸ್ಮಿತೆ. ನಕಲಿ ಗಾಂಧಿ ಮನೆತನದಿಂದ, ನಕಲಿ ಗಾಂಧಿ ಮನೆತನಕ್ಕಾಗಿ, ನಕಲಿ ಗಾಂಧಿ ಮನೆತನಕ್ಕೋಸ್ಕರ, ಇದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ! ನಕಲಿ ಗಾಂಧಿ ಕುಟುಂಬದ ಬುಡಕ್ಕೆ ಬೆಂಕಿ ಬಿದ್ದಾಗ ಮಾತ್ರ ಪಾದಯಾತ್ರೆ ನೆ‌ನಪಾಗುತ್ತದೆ. ದೇಶದಲ್ಲಿ ಉಗ್ರರ ದಾಳಿಯಾದಾಗ, ರೈತರ ಸರಣಿ ಆತ್ಮಹತ್ಯೆ ನಡೆದಾಗ, ಶಾಂತಿದೂತರು ಕಲ್ಲು ತೂರಾಟ ನಡೆಸಿದಾಗ ಕಾಂಗ್ರೆಸ್ಸಿಗರಿಗೆ ಪಾದಯಾತ್ರೆ ‌ನೆನಪಾಗುವುದಿಲ್ಲ. ಜನವಿರೋಧಿ ನಿಲುವು ಏಕೆ? ಎಂದು ಸರಣಿ ಟ್ವೀಟ್​ ಮೂಲಕ ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.
Koo App
ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ #ED ನೋಟಿಸ್ ಜಾರಿಯಾಗುತ್ತಿದ್ದಂತೆ ದೇಶಾದ್ಯಂತ ಅಶಾಂತಿ ಸೃಷ್ಟಿ ಮಾಡಲಾಗುತ್ತಿದೆ. ಇಡಿ ಕಚೇರಿ ಎದುರು ಪ್ರತಿಭಟನೆಯ ಕರೆಯ ಹಿಂದೆ ದೇಶ ವಿರೋಧಿ ಸಂಚು ಅಡಗಿದೆ. ಉತ್ತರದ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಹೋರಾಟವನ್ನು ಕಾಂಗ್ರೆಸ್ ಕರ್ನಾಟಕಕ್ಕೆ ಆಹ್ವಾನಿಸುತ್ತಿದೆ! #FakeGandhisBachaoToolKit
–BJP KARNATAKA (@BJP4Karnataka)13 June 2022

ಉಪ್ಪು ತಿಂದ ಮೇಲೆ ನೀರು ಕುಡಿಯ ಬೇಕು, ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಬೇಕು. ರಾಹುಲ್ ಗಾಂಧಿ ನೇತೃತ್ವದ ಯಂಗ್ ಇಂಡಿಯಾ ಸಂಸ್ಥೆ ಅಕ್ರಮ ಹಣ ವರ್ಗಾವಣೆ ಮಾಡಿರುವುದಕ್ಕೆ ಜಾರಿ ನಿರ್ದೇಶನಾಲಯದ ಬಳಿ ಸಾಕಷ್ಟು ಸಾಕ್ಷಿಗಳಿವೆ. ಸತ್ಯ ಅನಾವರಣಗೊಳಿಸುವುದು ಕಾಂಗ್ರೆಸ್ ದೃಷ್ಟಿಯಲ್ಲಿ ಮಾತ್ರ ದ್ವೇಷದ ರಾಜಕಾರಣ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ. ಕಾಂಗ್ರೆಸ್ ಪಕ್ಷದ 5000 ಸದಸ್ಯರ ಇಡಗಂಟಿನೊಂದಿಗೆ ಆರಂಭವಾದ ಅಸೋಸಿಯೇಟ್ ಜರ್ನಲ್ ಶೇರುಗಳನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಬಳಿಸಲಾಗಿದೆ. ಸ್ವಂತ ಮನೆಗೆ ಕನ್ನ ಹಾಕುವುದೆಂದರೆ ಇದೇ ಅಲ್ಲವೇ? ಮಾತೆತ್ತಿದರೆ ತ್ಯಾಗ-ಬಲಿದಾನದ ಕುಟುಂಬ ಎಂದು ಹೇಳುವ ಕಾಂಗ್ರೆಸ್ ನಾಯಕರೇ, ನಕಲಿ ಗಾಂಧಿಗಳ ವಂಶಸ್ಥರ ಅಕ್ರಮ ಆಸ್ತಿ ದೇಶಸೇವೆಗಾಗಿ ಬರೆದುಕೊಡಲಿ. ಅಕ್ರಮಿಗಳ ಹಣ ದೇಶಸೇವೆಗಾಗಿ ಮೀಸಲಿಟ್ಟಿದ್ದರೆ, ಅಕ್ರಮ ಹಣಗಳಿಕೆಯಲ್ಲಿ ಇಡಿ ಮುಂದೆ ನಿಲ್ಲಬೇಕಾದ ಪರಿಸ್ಥಿತಿ ಉದ್ಭವ ಆಗುತ್ತಿರಲಿಲ್ಲ ಎಂದು ಬಿಜೆಪಿ ಟೀಕಿಸಿದೆ.
ಬಾಲ‌ ಮುದುರಿಕೊಂಡು ಕುಳಿತಿದ್ದ ನಗರ ನಕ್ಸಲರು, ಶಾಂತಿದೂತರು, ಸಿಎಎ ವಿರೋಧಿ ಹೋರಾಟಗಾರರು ಈಗ ಒಮ್ಮೆಲೇ ಎದ್ದು ನಿಂತಿದ್ದಾರೆ. ಇಡಿ ನೋಟಿಸ್ ಬಳಿಕ ಈ ಘಟನೆ ನಡೆಯುತ್ತಿದೆ. ಹಾಗಾದರೆ ಇದು ಕಾಂಗ್ರೆಸ್ ಪ್ರೇರಿತ ರಾಷ್ಟ್ರ ವಿರೋಧಿ ಸಂಚಲ್ಲವೇ? ತಮ್ಮ ಪ್ರತಿ ಭಾಷಣದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ’ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ’ ಎಂಬುದನ್ನು ಪ್ರಸ್ತಾಪಿಸುತ್ತಾರೆ. ಅದೇ ಡಿಕೆಶಿ ಇಂದು ದೇಶದ ಸಾಂವಿಧಾನಿಕ ಮಾನ್ಯತೆ ಇರುವ ಸಂಸ್ಥೆ ನಕಲಿ ಗಾಂಧಿ ಕುಟುಂಬಕ್ಕೆ ನೀಡಿದ ನೋಟಿಸ್‌ಗೆ ನಕಲಿ ಗಾಂಧಿಗಳ ಜಪ ಮಾಡುತ್ತಿರುವುದು ವಿಪರ್ಯಾಸ ಎಂದು ಬಿಜೆಪಿ ಲೇವಡಿ ಮಾಡಿದೆ.
ಲಲಿತ ಮಹಲ್​ ಪ್ಯಾಲೇಸ್​ ಖಾಸಗಿ ತೆಕ್ಕೆಗೆ? ಸಿಎಂ ಅಧ್ಯಕ್ಷತೆಯಲ್ಲಿ ನಾಳೆ ಸಂಪುಟ ಉಪ ಸಮಿತಿ ಸಭೆ

ಬದುಕಿರುವಾಗಲೇ ಗುಬ್ಬಿ ಶಾಸಕ ಶ್ರೀನಿವಾಸ್​ರ ತಿಥಿ ಕಾರ್ಡ್​ ತಯಾರಿಸಿ ವಿಕೃತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + four =
Remember me
