ಬೆಂಗಳೂರು:ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೆ ಯುವತಿಯರು ಮಂಚ‌ ಹತ್ತಬೇಕು. ಯುವಕರಿಗೆ ನೌಕರಿ ಬೇಕು ಅಂದ್ರೆ ಲಂಚ ಕೊಡಬೇಕು ಎಂಬಂತಹ ಕೆಟ್ಟ ಪರಿಸ್ಥಿತಿಯನ್ನು ಕರ್ನಾಟಕದಲ್ಲಿ ಈಗಿನ ರಾಜ್ಯ ಸರ್ಕಾರ(ಬಿಜೆಪಿ) ನಿರ್ಮಿಸಿದೆ. ರಾಜ್ಯದಲ್ಲಿ ಲಂಚ‌-ಮಂಚದ ಸರ್ಕಾರ ಕೆಲಸ ನಿರ್ವಹಿಸುತ್ತಿದೆ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.
ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೇ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ‌ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ‌ನಾಯಕರುಗಳು ಮಹಿಳೆಯರ ಮೇಲೆ ನಡೆಸಿದ ” ದಿಗ್ವಿಜಯ” ” ಅಭಿಷೇಕ” ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಸರಣಿ ‘ಕೂ’ ಮಾಡುವ ಮೂಲಕ ಪ್ರಿಯಾಂಕ್​ ಖರ್ಗೆಯನ್ನು ಬಿಜೆಪಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
Koo App
ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? #ಮಹಿಳಾವಿರೋಧಿಕಾಂಗ್ರೆಸ್
–BJP KARNATAKA (@BJP4Karnataka)13 Aug 2022
ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು. ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಪ್ರಿಯಾಂಕ್​ ಖರ್ಗೆಯನ್ನು ಬಿಜೆಪಿ ಆಗ್ರಹಿಸಿದೆ.
ಬಿಜೆಪಿಯವರಿಗೆ ಉರಿ ಬಿದ್ದಿದೆ:ಬಿಜೆಪಿ ಮಾತಿಗೆ ತಿರುಗೇಟು ನೀಡಿರುವ ಪ್ರಿಯಾಂಕ್​ ಖರ್ಗೆ, ನಾನು ‘ಲಂಚ ಮಂಚದ ಸರ್ಕಾರ’ ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ. ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ. ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವರು, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಬಿಜೆಪಿ ಸಂಸದರು, ಮಂತ್ರಿಗಳು, ಶಾಸಕರು ಕೋರ್ಟಿನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.
Koo App
ನಾನು ’ಲಂಚ ಮಂಚದ ಸರ್ಕಾರ’ ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ! ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ! ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವರು, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಬಿಜೆಪಿ ಸಂಸದರು, ಮಂತ್ರಿಗಳು,ಶಾಸಕರು ಕೋರ್ಟಿನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ?
–ಪ್ರಿಯಾಂಕ್ ಖರ್ಗೆ (@ಪ್ರಿಯಾಂಕ್_ಖರ್ಗೆ)12 Aug 2022

ಸರ್ಕಾರಿ ಕೆಲ್ಸ ಬೇಕು ಅಂದ್ರೆ ಮಂಚ‌ ಹತ್ತಬೇಕು- ಲಂಚ ಕೊಡ್ಬೇಕು: ಪ್ರಿಯಾಂಕ್​ ಖರ್ಗೆ ಗಂಭೀರ ಆರೋಪ

ಧರ್ಮಸ್ಥಳದಲ್ಲಿ ರೂಂ ಸಿಗಲಿಲ್ಲವೆಂದು ಸುಬ್ರಹ್ಮಣ್ಯಕ್ಕೆ ಹೊರಟಿದ್ದ ಭಿನ್ನಕೋಮಿನ ಜೋಡಿಗೆ ಮಾರ್ಗದಲ್ಲೇ ಕಾದಿತ್ತು ಶಾಕ್​

ನಾಗರಹಾವಿನ ಹೆಡೆಯಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿದ ತಾಯಿ! ಮಂಡ್ಯದಲ್ಲಿ ಎದೆ ಝಲ್​ ಅನ್ನಿಸೋ ಘಟನೆ, ವಿಡಿಯೋ ವೈರಲ್​

ಹೊಳೆನರಸೀಪುರ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕುಯ್ದು ಕೊಂದ ಗಂಡ: ಎರಡೂ ಹೆಣ್ಣು ಮಕ್ಕಳಾಗಿದ್ದಕ್ಕೆ ಕ್ರೌರ್ಯ ಮೆರೆದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 3 =
Remember me
