ಮೈಸೂರು:ಕರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಅಂತ್ಯಸಂಸ್ಕಾರಕ್ಕೆ ಸಾಗಿಸುತ್ತಿದ್ದವ ಮತ್ತು ಫಾಗಿಂಗ್ ವಾಹನದಲ್ಲಿ ಕೆಲಸ ಮಾಡುತ್ತಿದ್ದವ ಸೇರಿ ಇಬ್ಬರು ಕರೊನಾಗೆ ಬಲಿಯಾಗಿದ್ದಾರೆ. ಈ ಪೈಕಿ ಬ್ಲ್ಯಾಕ್ ಫಂಗಸ್ ಆಗಿ ಜಿಲ್ಲೆಯಲ್ಲಿ ಮೊದಲ ಬಲಿ ಆಗಿದೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.
ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರಾಗಿದ್ದ ವಿನೋದ್ (28) ಮತ್ತು ರವಿ (38) ಮೃತರು. ರವಿ ಕೋವಿಡ್​ಗೆ ಬಲಿಯಾದವರ ಮೃತದೇಹ ಸಾಗಿಸುವ ವಾಹನದ ಚಾಲಕರಾಗಿದ್ದರು. ವಿನೋದ್ ಫಾಗಿಂಗ್ ವಾಹನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
16 ದಿನದ ಹಿಂದೆ ರವಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ನಂತರ ರವಿಗೆ ಬ್ಲ್ಯಾಕ್ ಫಂಗಸ್ ಆಗಿದ್ದು, ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಬ್ಲ್ಯಾಕ್​ ಫಂಗಸ್​ಗೆ ಮೈಸೂರಿನಲ್ಲಿ ಇದು ಮೊದಲ ಬಲಿ ಎನ್ನಲಾಗಿದೆ.
ವಿನೋದ್​ಗೆ ಮೂರು ದಿನದ ಹಿಂದೆ ಕರೊನಾ ಸೋಂಕು ತಗುಲಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರೂ ಮೃತಪಟ್ಟಿದ್ದಾರೆ.
ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಕರೊನಾ ಸೋಂಕಿನಿಂದ ಸತ್ತವನ ಮೃತದೇಹ ತಬ್ಬಿಕೊಂಡು ತುಟಿಗೆ ಮುತ್ತಿಟ್ಟ ಭೂಪ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 2 =
Remember me
