ಬೆಂಗಳೂರು:ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಜತೆ ಸಲುಗೆ ಬೆಳೆಸಿಕೊಂಡ ಬಸ್​ ಚಾಲಕನೊಬ್ಬ, ಆಕೆಯನ್ನ ತಿಪಟೂರಿಗೆ ಕರದೊಯ್ದು ತೋಟದ ಮನೆಯಲ್ಲಿ ನಗ್ನಗೊಳಿಸಿ ಕೂಡಿ ಹಾಕಿದ ಪ್ರರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಸವೇಶ್ವರನಗರ ನಿವಾಸಿ 40 ವರ್ಷದ ಮಹಿಳೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಬಿಎಂಟಿಸಿ ಬಸ್​ವೊಂದರಲ್ಲಿ ಪ್ರತಿದಿನ ಪ್ರಯಾಣಿಸುತ್ತಿದ್ದರು. 2019ರಲ್ಲಿ ಚಾಲಕ ವಿಶ್ವನಾಥ್(42) ಪರಿಚಯವಾಗಿ ಮಹಿಳೆಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಇಬ್ಬರ ನಡುವೆ ಸಲುಗೆ ಬೆಳೆದ ಬಳಿಕ ತಿಪಟೂರಿನಲ್ಲಿರುವ ಮನೆಗೆ ಮಹಿಳೆಯನ್ನು ಆಗಾಗ ಕರೆದುಕೊಂಡು ಹೋಗುತ್ತಿದ್ದ.ಇದನ್ನೂ ಓದಿರಿಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ
ವಿವಾಹವಾಗುವುದಾಗಿ ಮಹಿಳೆಯನ್ನು ನಂಬಿಸಿದ್ದ ವಿಶ್ವನಾಥ್, ಆಕೆಯಿಂದ 2.70 ಲಕ್ಷ ರೂ. ಪಡೆದಿದ್ದ. ಹಣ ಪಡೆದು 2 ವರ್ಷ ಕಳೆದರೂ ಹಿಂತಿರುಗಿಸದೆ ಸತಾಯಿಸುತ್ತಿದ್ದ. ಮಾ.23ರಂದು ನಿನಗೆ ನೀಡಬೇಕಿರುವ ಹಣವನ್ನು ಕೊಡುತ್ತೇನೆ ಎಂದು ಹೇಳಿ ಕೆಎಸ್​ಆರ್​ಟಿಸಿ ಬಸ್​ನಲ್ಲಿ ತಿಪಟೂರಿನ ಹಾಲುಕುರ್ಕೆ ಬಳಿಯಿರುವ ತೋಟದ ಮನೆಗೆ ಮಹಿಳೆಯನ್ನ ಕರೆದುಕೊಂಡು ಹೋಗಿದ್ದ. ತೋಟದ ಮನೆಯಲ್ಲಿ ಕೊಠಡಿಯಲ್ಲಿ ಕೂಡಿಹಾಕಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾನೆ. ಹಣ ಕೇಳಿದರೆ ಮಾರಕಾಸ್ತ್ರದಿಂದ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದ. 2 ದಿನಗಳ ಕಾಲ ತೋಟದ ಮನೆಯಲ್ಲೇ ಇರಿಸಿಕೊಂಡು ಹಿಂಸೆ ಕೊಟ್ಟಿದ್ದಾನೆ ಎಂದು ಸಂತ್ರಸ್ತೆ ದೂರು ಕೊಟ್ಟಿದ್ದು, ಬಿಎಂಟಿಸಿ ಬಸ್ ಚಾಲಕನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಅಮ್ಮನ ಕೈತುತ್ತು ತಿನ್ನುತ್ತಿರುವಾಗಲೇ ತಲೆ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಸಾವು!

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − three =
Remember me
