ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಬಿಎಂಟಿಸಿ ಬಸ್​ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಕನಕಪುರ ರಸ್ತೆ ಸೌತ್​ಎಂಡ್ ಸರ್ಕಲ್​ನಲ್ಲಿ ಮಂಗಳವಾರ ಮಧ್ಯಾಹ್ನ 1.15ರ ಸುಮಾರಿಗೆ ಬಿಎಂಟಿಸಿ ಬಸ್​ ಬೆಂಕಿಗೆ ಆಹುತಿಯಾಗಿದೆ. ಮೊದಲು ಇಂಜನ್​ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಡ್ರೈವರ್ ಮತ್ತು ಕಂಡಕ್ಟರ್ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಗೆ ವ್ಯಾಪಿಸಿದೆ.
ಬಸ್​ನಲ್ಲಿ ಸುಮಾರು ಇಪ್ಪತ್ತು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆ ಆಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಜ.21ರಂದು ಕೆ.ಆರ್​.ಮಾರುಕಟ್ಟೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್​ವೊಂದು ಚಾಮರಾಜಪೇಟೆಯ ಮಕ್ಕಳಕೂಡ ಬಳಿ ನಡುರಸ್ತೆಯಲ್ಲೇ ಹೊತ್ತಿ ಉರಿದಿತ್ತು.
ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್​! 40 ಪ್ರಯಾಣಿಕರು ಅಪಾಯದಿಂದ ಪಾರು

ಕರೊನಾ ಸಂಕಷ್ಟ ಕಾಲದಲ್ಲಿ ಯಾರಿಗೂ ಹೊರೆಯಾಗದ ಕೇಂದ್ರ ಬಜೆಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − six =
Remember me
