ಬೆಂಗಳೂರು:ಸುಮಾರು 40 ಮಂದಿ ಪ್ರಯಾಣಿಸುತ್ತಿದ್ದ ಬಿಎಂಟಿಸಿ ಬಸ್​ವೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಕೆ.ಆರ್​.ಮಾರುಕಟ್ಟೆ ಸಮೀಪದ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಸಂಭವಿಸಿದೆ.
ದೀಪಾಂಜಲಿನಗರ ಡಿಪೋಗೆ ಸೇರಿದ KA57 F1592 ನಂಬರ್​ನ ಬಸ್​ ಹೊಸಕೆರೆಹಳ್ಳಿಯಿಂದ ಕೆ.ಆರ್​.ಮಾರುಕಟ್ಟೆಗೆ ಸಂಚರಿಸುತ್ತಿತ್ತು. ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಬಸ್​ ಬರುತ್ತಿದ್ದಂತೆ ಇಂಜಿನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ.. ಬೆಂಕಿ… ಎಂದು ಡ್ರೈವರ್​ ಕೂಗಿದರು. ಕೂಡಲೇ ಬಸ್​ ನಿಲ್ಲಿಸಿ ಡ್ರೈವರ್​ ಮತ್ತು ಕಂಡಕ್ಟರ್​ ಇಬ್ಬರೂ ಕೆಳಗಿಳಿದು, ಪ್ರಯಾಣಿಕರಿಗೆ ಕೆಳಗೆ ಇಳಿಯಲು ನೆರವಾದರು. ನೋಡನೋಡುತ್ತಿದ್ದಂತೆ ಬಸ್​ನಲ್ಲಿ ಬೆಂಕಿಯ ಜ್ವಾಲೆ ವ್ಯಾಪಸಿತ್ತು. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ. ಪ್ರಯಾಣಿಕರಿಗೆ ಬೇರೆ ಬಸ್​ ವ್ಯವಸ್ಥೆ ಮಾಡಿ ಕಳುಹಿಸಲಾಯಿತು. ಸ್ಥಳದಲ್ಲಿ ಕೆಲ ಹೊತ್ತು ಆತಂಕಕಾರಿ ವಾತಾವಾರಣ ನಿರ್ಮಾಣವಾಗಿತ್ತು‌.
ರಾಜ್ಯದ ಎಲ್ಲ ಜಿಲ್ಲೆಯಲ್ಲೂ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಹಸಿರು ನಿಶಾನೆ

ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್​ ಇನ್​ಸ್ಪೆಕ್ಟರ್​! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
