ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಒಡೆತನದ ಶಾಲೆಗೆ ಬಾಂಬ್​ ಇಡೋದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದು, ಪೊಲೀಸರು, ಬಾಂ ಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್​ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರನ್ನೆಲ್ಲಾ ಬೇರೆಡೆಗೆ ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ.
ಆರ್​ಆರ್ ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಡಿಕೆಶಿ ಮಾಲೀಕತ್ವದ ನ್ಯಾಶನಲ್ ಹಿಲ್​ ವ್ಯೂ ಪಬ್ಲಿಕ್ ಸ್ಕೂಲ್ ಇದೆ. ಈ ಶಾಲೆಗೆ ಬಾಂಬ್​ ಹಾಕುವುದಾಗಿ ಭಾನುವಾರ ಸಂಜೆ ದುಷ್ಕರ್ಮಿಗಳು ಯೂನಿಟ್​-3ಗೆ ಮೇಲ್​ ಮಾಡಿದ್ದಾರೆ. ಸೋಮವಾರ ಬೆಳಗ್ಗೆ ಸಿಬ್ಬಂದಿ ಶಾಲೆಗೆ ಬಂದಾಗ ಮೇಲ್​ ನೋಡಿ ಗಾಬರಿಯಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಆರ್​ಆರ್​ ನಗರ ಠಾಣೆ ಪೊಲೀಸರು ಮತ್ತು ಬಾಂಬ್​ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈಗಾಗಲೇ ಶಾಲೆಯ ಯೂನಿಟ್ 1ರಿಂದ ಯೂನಿಟ್ 2ಗೆ ಒಂದೂವರೆ ಸಾವಿರ ಮಕ್ಕಳನ್ನು ಸಿಬ್ಬಂದಿ ಶಿಫ್ಟ್ ಮಾಡಿದ್ದಾರೆ.
ಶಾಲೆಗೆ ಆಗಮಿಸಿದ ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್, ಸಿಬ್ಬಂದಿ ಮತ್ತು ಪೊಲೀಸರ ಬಳಿ ಮಾಹಿತಿ ಪಡೆಯುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಭಯದಲ್ಲೇ ಪೋಷಕರು ಶಾಲೆ ಮುಂದೆ ಜಮಾಯಿಸಿದ್ದು, ಮಕ್ಕಳನ್ನ ನೋಡಬೇಕು ಅನ್ನುತ್ತಿದ್ದಾರೆ.
‘ಹುಚ್ಚ ವೆಂಕಟ್’​ ಹೆಸರಲ್ಲಿ ಡಿಕೆಶಿ ಒಡೆತನದ ಶಾಲೆಗೆ ಬಾಂಬ್​ ಬೆದರಿಕೆ! ಪಾಲಕರಿಗೆ ಧೈರ್ಯ ತುಂಬಿದ ಅಪ್ಪ-ಮಗಳು

ಬೈಕ್​ ಸ್ಕಿಡ್​ ಆಗಿ ವಿದ್ಯಾರ್ಥಿಗಳಿಬ್ಬರ ಸಾವು: ರಜೆ ಹಿನ್ನೆಲೆ ಮುರುಡೇಶ್ವರಕ್ಕೆ ತೆರಳುವಾಗ ಅವಘಡ

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ರೊಚ್ಚಿಗೆದ್ದ ಜನರಿಂದ 14 ಶಾಲಾ ಬಸ್​ಗಳಿಗೆ ಬೆಂಕಿ ಇಟ್ಟು ದಾಂಧಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
