ಯಳಂದೂರು:ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಶ್ರೀ ಬಿಳಿಗಿರಂಗನಾಥ ಸ್ವಾಮಿ ಮಹಾರಥೋತ್ಸವ (ದೊಡ್ಡಜಾತ್ರೆ) ಶನಿವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.
ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರತಿವರ್ಷ ದೊಡ್ಡ ಜಾತ್ರೆ ನಡೆಯುತ್ತದೆ. ಆದರೆ ದೇವಸ್ಥಾನ ಜೀಣೋರ್ದ್ಧಾರ ಕಾಮಗಾರಿ ಹಾಗೂ ಕರೊನಾ ಹಿನ್ನೆಲೆಯಲ್ಲಿ 5 ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ. ಹೀಗಾಗಿ, ಈ ಬಾರಿಯ ಜಾತ್ರೆ ಮಹತ್ವ ಪಡೆದುಕೊಂಡಿತ್ತು. ಸ್ಥಳೀಯರು ಮಾತ್ರವಲ್ಲದೆ, ಹೊರ ಜಿಲ್ಲೆಗಳಿಂದಲೂ ಅಪಾರ ಭಕ್ತರು ಭಾಗವಹಿಸಿದ್ದರು. ರಥೋತ್ಸವ ಹಿನ್ನೆಲೆ ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಮುಂಜಾನೆ 5 ಗಂಟೆಗೆ ಕಲ್ಯಾಣೋತ್ಸವ, ಬೆಳಗ್ಗೆ 7 ಗಂಟೆಗೆ ಪ್ರಸ್ಥಾನ ಮಂಟಪೋತ್ಸವ, ಮಧ್ಯಾಹ್ನ 12.10ರಿಂದ 12.22ರವರೆಗೆ ಸಲ್ಲುವ ಶುಭ ಕರ್ಕಾಟಕ ಲಗ್ನದ ಚಂದ್ರನವಾಂಶ ಶುಭ ಮುಹೂರ್ತದಲ್ಲಿ ಮಹಾರಥೋತ್ಸವ ಜರುಗಿತು.
ಉಚಿತ ಬಸ್​ ಸೇವೆ: ಯಳಂದೂರು ಪಟ್ಟಣದಿಂದ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಿರಿದಾಗಿದೆ. ಜಾತ್ರೆಯ ದಿನ ಈ ಭಾಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುವುದರಿಂದ ಸಂಚಾರಕ್ಕೆ ತೊಡಕಾಗುತ್ತದೆ ಎಂದು ಅಧಿಕಾರಿಗಳು ಸಲಹೆ ನೀಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಚೆಕ್​ಪೋಸ್ಟ್​ ಬಳಿಯಿಂದ ಬೆಟ್ಟಕ್ಕೆ ಕೆಎಸ್​ಆರ್​ಟಿಸಿಯಿಂದ ಉಚಿತ ಬಸ್​ ವ್ಯವಸ್ಥೆ ಮಾಡಲಾಗಿತ್ತಾದರೂ ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ಬೆಳಗ್ಗೆಯಿಂದಲೇ ಕಿಲೋ ಮೀಟರ್​ವರೆಗೂ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ನೂರಾರು ಭಕ್ತರಿಗೆ ಯಳಂದೂರಿನಲ್ಲೇ ಬಸ್​ ಸಿಗದೆ ಪರದಾಡುವಂತಾಯಿತು.
ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಬಿಳಿಗಿರಿರಂಗನಬೆಟ್ಟ ‘ದಕ್ಷಿಣದ ತಿರುಪತಿ’ ಎಂದೇ ಪ್ರಸಿದ್ಧಿ ಪಡೆದಿದೆ. ಪುರಾತನ ಇತಿಹಾಸ ಹೊಂದಿರುವ ಬೆಟ್ಟದಲ್ಲಿ ನೆಲೆಸಿರುವ ಬಿಳಿಗಿರಿರಂಗನಾಥಸ್ವಾಮಿ ಹಾಗೂ ಅಲಮೇಲಮ್ಮ ದೇವರ ಈ ಪ್ರಾಂತ್ಯದ ಭಕ್ತರ ಆರಾಧ್ಯ ದೈವವಾಗಿದ್ದಾರೆ.
ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಬುರ್ಕಾ ಬಟನ್​ನಲ್ಲೂ ಚಿನ್ನ ಸಾಗಾಟ! ಮಂಗಳೂರಲ್ಲಿ 5 ಲಕ್ಷ ಮೌಲ್ಯದ ಚಿನ್ನ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 5 =
Remember me
