ಮೈಸೂರು:ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್ ಕ್ಯಾಂಪೇನ್ ಶುರುವಾಗಿದ್ದು, ಸಿಂಧೂರಿ ಅವರನ್ನು ಮತ್ತೆ ಮೈಸೂರಿನ ಜಿಲ್ಲಾಧಿಕಾರಿಯನ್ನಾಗಿ ನೇಮಿಸಬೇಕು ಎಂದು ಒತ್ತಾಯ ಭುಗಿಲೆದ್ದಿದೆ.
‘ಚೇಂಜ್ ಆರ್ಗ್’ ಸಾಮಾಜಿಕ ಮಾಧ್ಯಮದಲ್ಲಿ “ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ” ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದ್ದು, ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ಆಗಿದೆ. ರೋಹಿಣಿ ಸಿಂಧೂರಿ ವರ್ಗಾವಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮೈಸೂರು ಜಿಲ್ಲೆಯಲ್ಲಿ ನನಗೆ ಕೆಲಸ ಮಾಡಲು ಬಿಡಲಿಲ್ಲ. ಕೆಲವರು ಅನಗತ್ಯವಾಗಿ ತೊಂದರೆ ಕೊಟ್ಟರು‌. ಭೂಮಿ ಒತ್ತುವರಿ ತೆರವು ಮಾಡಲು ನಾನು ಪ್ರಯತ್ನ ಮಾಡಿದ್ದೆ. ಕೆರೆಗಳನ್ನು ಉಳಿಸೋದು, ಸರ್ಕಾರಿ ಭೂಮಿ ರಕ್ಷಣೆ ಮಾಡೋದು ನನ್ನ ಆದ್ಯತೆ ಆಗಿತ್ತು. ಆ ನಿಟ್ಟಿನಲ್ಲಿ ಮೊದಲ ದಿನದಿಂದಲೂ ಕಾರ್ಯ ನಿರ್ವಹಿಸಿದ್ದೆ ಎನ್ನುವ ಮೂಲಕ ಭೂ ಮಾಫಿಯಾದ ಬುಡಕ್ಕೆ ಕೊಡಲಿ ಇಟ್ಟಿದ್ದರು. ಈ ಹೇಳಿಕೆ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು.ಇದನ್ನೂ ಓದಿರಿಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಜಿಲ್ಲಾಧಿಕಾರಿಯ ಈ ಗಂಭೀರ ಆರೋಪ ಖಂಡಿಸಿ ಶಾಸಕ ಸಾ.ರಾ.ಮಹೇಶ್​ ಪ್ರತಿಭಟನೆಯನ್ನೂ ಮಾಡಿದ್ದರು. ನಾನು ಅಕ್ರಮ ಮಾಡಿಲ್ಲ, ಇದು ಸಾಬೀತು ಆಗದಿದ್ದರೆ ಸಿಂಧೂರಿಯನ್ನ ಐಎಎಸ್​ ಹುದ್ದೆಯಿಂದಲೇ ಅಮಾನತು ಮಾಡಬೇಕು. ನನ್ನ ತಪ್ಪಿದ್ದರೆ ನಾನು ರಾಜಕೀಯ ನಿವೃತ್ತಿಯನ್ನೇ ಪಡೆಯುವೆ ಎಂದು ಸವಾಲು ಹಾಕಿದ್ದರು. ಇದಕ್ಕೂ ಮುನ್ನ ಜಿಲ್ಲೆಯ ಬಹುತೇಕ ಜನಪ್ರತಿನಿಧಿಗಳು ರೋಹಿಣಿ ವರ್ಗಾವಣೆಗೆ ಪಟ್ಟು ಹಿಡಿದಿದ್ದರು. ಸಿಂಧೂರಿ ವಿರುದ್ಧ ಶಿಲ್ಪಾನಾಗ್​ರ ಅಸಮಾಧಾನ ಹೊರಬೀಳುತ್ತಿದ್ದಂತೆ ಶಿಲ್ಪಾನಾಗ್​ ಮತ್ತು ಸಿಂಧೂರಿ ಇಬ್ಬರನ್ನೂ ಸರ್ಕಾರ ಕಳೆದ ವಾರ ವರ್ಗಾವಣೆ ಮಾಡಿದೆ. ಇವರಿಬ್ಬರಿಂದ ತೆರವಾದ ಸ್ಥಾನಕ್ಕೆ ಬೇರೆ ಅಧಿಕಾರಿಗಳು ಬಂದಿದ್ದಾರೆ.
ಇದೀಗ ಸಿಂಧೂರಿ ಮತ್ತೆ ಜಿಲ್ಲೆಗೆ ಬರಬೇಕು, ಜಿಲ್ಲಾಧಿಕಾರಿಯಾಗಿ ಇಲ್ಲೇ ಕೆಲಸ ಮಾಡಬೇಕು ಎಂದು ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದೆ. ಸಾರ್ವಜನಿಕರಿಂದ ಸಂಗ್ರಹವಾದ ಸಹಿಯನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ತಲುಪಿಸಲು ತಯಾರಿ ನಡೆದಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿಯ ಅಭಿಯಾನಕ್ಕೆ ಈಗಾಗಲೇ 26 ಸಾವಿರ ಜನ ಸಹಿ ಹಾಕಿದ್ದಾರೆ.(ದಿಗ್ವಿಜಯ ನ್ಯೂಸ್​)
ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಹೋಟೆಲ್​ಗೆ ಬೀಗ ಹಾಕಿ ಒಳಗಡೆ ವೇಶ್ಯಾವಾಟಿಕೆ! ಪೊಲೀಸರಿಗೆ ಸಿಕ್ಕಿಬಿದ್ದ 8 ಯುವಕರು, ಇಬ್ಬರು ಯುವತಿಯರು

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಮಗಳ ಮದ್ವೆ ತಪ್ಪಿಸಲು ಪ್ರಿಯಕರನೊಂದಿಗೆ ಸೇರಿ ಭಾವಿ ಅಳಿಯನ ತಂದೆಯನ್ನೇ ಕೊಂದ ತಾಯಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 3 =
Remember me
