ಶಿವಮೊಗ್ಗ:ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮದ ಸುಳಿವು ಸಿಕ್ಕಿದೆ. ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕೀಳುಮಟ್ಟದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್​ ನಾಯಕರೇ, ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ನಡೆದ ಅಕ್ರಮದ ಬಗ್ಗೆ ಜನರಿಗೆ ಉತ್ತರ ನೀಡಿ ಎಂದು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ತನಿಖೆ ಬಿರುಸುಗೊಂಡಿದೆ. ಹಲವರನ್ನು ಈಗಾಗಲೇ ಬಂಧಿಸಲಾಗಿದೆ. ಶೀಘ್ರದಲ್ಲೇ ರಾಜ್ಯದ ಜನರಿಗೆ ವಾಸ್ತವ ಸಂಗತಿ ತಿಳಿಯಲಿದೆ. ಕಾಂಗ್ರೆಸ್​ನವರು ಮೂರು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆ ಎಂದು ರಮೇಶ್​ ಕುಮಾರ್​ ಹೇಳಿದ್ದರು. ಈ ಮಾತು ನಿಜ ಎಂಬುದು ಸಾಬೀತಾಗುತ್ತಿದೆ ಎಂದರು.
ಕಾಂಗ್ರೆಸ್​ನವರು ಮೂರು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ ಎಂದು ರಮೇಶ್​ಕುಮಾರ್​ ಬಹಿರಂತ ಸಭೆಯಲ್ಲಿ ಹೇಳಿದ್ದನ್ನು ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಕಡೇ ಪಕ್ಷ ಸಿದ್ದರಾಮಯ್ಯ ಕೂಡ ಅಲ್ಲಗಳೆದಿಲ್ಲ. ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಜನಪರವಾಗಿ ಚಿಂತನೆ ಮಾಡಿಲ್ಲ ಎಂಬುದಕ್ಕೆ ಇದೇ ನಿದರ್ಶನ ಎಂದು ಬಿಎಸ್​ವೈ ವಾಗ್ದಾಳಿ ನಡೆಸಿದರು.
ತಮ್ಮ ಅವಧಿಯಲ್ಲಿ ಅಕ್ರಮ ನಡೆಸಿದ ಕಾಂಗ್ರೆಸ್​ ಮುಖಂಡರು ಈಗ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಪೋಸ್ಟರ್​ ರಾಜಕೀಯ ಮಾಡುತ್ತಿದ್ದಾರೆ. ಇದರ ವಿರುದ್ಧ ದೂರು ದಾಖಲಿಸಿದ್ದೇವೆ. ಇಂತಹ ಕೀಳು ಮಟ್ಟದ ರಾಜಕೀಯ ಕಾಂಗ್ರೆಸ್​ನವರಿಗೆ ಶೋಭೆ ತರುವುದಿಲ್ಲ ಎಂದು ಯಡಿಯೂರಪ್ಪ ಕಿಡಿಕಾರಿದರು.
ಪರಸ್ಪರ ಮದ್ವೆಯಾಗಲು ನಿರ್ಧರಿಸಿದ್ದ ಬೆಂಗಳೂರಿನ ಶಾಲಾ ಬಾಲಕಿಯರು… ಇವರ ಕರುಣಾಜನಕ ಕಥೆ ಕೇಳಿದ್ರೆ ಕರುಳುಹಿಂಡುತ್ತೆ…

ಒಬ್ಬಳಿಗಾಗಿ ಇಬ್ಬರ ಗಲಾಟೆ: ಪ್ರಿಯತಮೆ-ನಗರಸಭೆ ಸದಸ್ಯನ ಕಿರುಕುಳ… ಚಿಕ್ಕಬಳ್ಳಾಪುರದಲ್ಲಿ ನಡೆಯಿತು ಘೋರ ದುರಂತ

ಜಿಪಂ, ತಾಪಂ ಚುನಾವಣೆ: ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿದ ಹೈಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eighteen =
Remember me
