ಬೆಂಗಳೂರು:ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರ ಮೊಮ್ಮಗಳು ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಗರದಲ್ಲಿ ಸಂಭವಿಸಿದೆ.
ಬಿಎಸ್​ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ(30) ಮೃತರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಎಂಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರನ್ನು ಡಾ.ನೀರಜ್​ ಜತೆ ಮದುವೆ ಮಾಡಿಕೊಡಲಾಗಿತ್ತು.

ಕ್ರೆಸೆಂಟ್ ರಸ್ತೆಯ ಅಪಾರ್ಟ್‌ಮೆಂಟ್​ನಲ್ಲಿ ನೆಲೆಸಿದ್ದರು. ದಂಪತಿಗೆ ಒಂದು ಮಗು ಇದೆ. ಶುಕ್ರವಾರ ಬೆಳಗ್ಗೆ ಪತಿ ನೀರಜ್​ ಕೆಲಸಕ್ಕೆ ಹೋಗಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆ ಕೆಲಸದವರು ಮನೆ ಬಳಿಗೆ ಬಂದು ಬಾಗಿಲು ಬಡಿದರೂ ತೆರೆದಿರಲಿಲ್ಲ. ಆಗ ನೀರಜ್​ಗೆ ಫೋನ್​ ಮಾಡಿ ತಿಳಿಸಿದ್ದರು. ಆ ವೇಳೆ ಸೌಂದರ್ಯ ಮೃತಪಟ್ಟಿರುವುದು ಗೊತ್ತಾಗಿದೆ.

ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ.
ಬಿಎಸ್​ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…

ವೈದ್ಯರ ಎಡವಟ್ಟು: ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಯುವಕನಿಗೆ ಕಾಲು ಕತ್ತರಿಸುವ ಹಂತಕ್ಕೆ ಸೋಂಕು

ನಿರೂಪಕರ ಬದಲಾವಣೆ: ಸಿಎಂ ಮನೆ ಬಳಿ ಏಕಾಂಗಿ ಹೋರಾಟ ನಡೆಸಿದ್ದ ಡಾ.ಗಿರಿಜಾಗೆ ಮಣೆ, ಅಪರ್ಣಾಗೆ ತಪ್ಪಿದ ಅವಕಾಶ

ತರಬೇತಿ ನಿರತ ವೈದ್ಯೆಗೆ ಲಿಫ್ಟ್​ನಲ್ಲೇ ಮುತ್ತು ಕೊಟ್ಟ ಪ್ರಕರಣ: ಹಿಮ್ಸ್​ ಆಸ್ಪತ್ರೆ ವೈದ್ಯ ಡಾ.ಲೋಕೇಶ್​ ಅಮಾನತು

Sign in to your account
Please enter an answer in digits:13 − 3 =
Remember me
