ಬೆಂಗಳೂರು:ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11ಕ್ಕೆ ಪ್ರಮಾಣವಚನ ಸ್ವೀಕರಿಸುವ ಸಿದ್ಧತೆಯಲ್ಲಿದ್ದಾರೆ. ಅತ್ತ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಆಕಾಂಕ್ಷಿತರು ಹಂಗಾಮಿ ಸಿಎಂ ಯಡಿಯೂರಪ್ಪ ಅವರ ನಿವಾಸದ ಬಳಿ ಗಿರಕಿ ಹೊಡೆಯುತ್ತಲೇ ಇದ್ದಾರೆ.
ಕಾವೇರಿ ನಿವಾಸ ರಾಜಕೀಯ ಕೇಂದ್ರಬಿಂದುವಾಗಿದ್ದು, ಯಡಿಯೂರಪ್ಪ ಅವರನ್ನ ಭೇಟಿ ಮಾಡಲು ಇಂದು ಬೆಳಗ್ಗೆಯಿಂದೇ ಮಾಜಿ ಸಚಿವರು, ಶಾಸಕರು ಆಗಮಿಸುತ್ತಿದ್ದಾರೆ. ಯಡಿಯೂರಪ್ಪ ಅವರೇ ಸುಪ್ರೀಂ ಎಂದು ಭಾವಿಸಿರೋ ಶಾಸಕರು ಮತ್ತು ಮಾಜಿ ಸಚಿವರು ಸಚಿವ ಸಂಪುಟ ಸೇರಲು ಭಾರೀ‌ ಲಾಭಿ ನಡೆಸುತ್ತಿದ್ದಾರೆ. ಒಬ್ಬೊಬ್ಬರಾಗಿ ಕಾವೇರಿಗೆ ಆಗಮಿಸುತ್ತಿದ್ದು, ಮನದ ಬೇಡಿಕೆಯನ್ನು ಈಡೇರಿಸುವಂತೆ ಬಿಎಸ್​ವೈ ಅವರಿಗೆ ಮನವಿ ಮಾಡುತ್ತಿದ್ದಾರೆ.
ಕುಮಟಾ ಶಾಸಕ ದಿನಕರ್ ಶೆಟ್ಟಿ, ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ, ವಿರೂಪಾಕ್ಷಪ್ಪ ಬಳ್ಳಾರಿ, ತಿಪ್ಪಾರೆಡ್ಡಿ ಮಾತ್ರವಲ್ಲ, ಆರ್.ಅಶೋಕ್, ಬೈರತ್ತಿ ಬಸವರಾಜ್, ಪ್ರಭು ಚೌಹಾಣ್, ಗೋವಿಂದ ಕಾರಜೋಳ, ಡಾ.ಕೆ. ಸುಧಾಕರ್, ಭೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್ ಮತ್ತಿತರರು ಬಿಎಸ್​ವೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ವೇಳೆ ಬಿಎಸ್​ವೈ ಕಣ್ಣೀರಿಟ್ಟಿದ್ದನ್ನು ಸಹಿಸದೆ ಅಭಿಮಾನಿ ನೇಣಿಗೆ ಶರಣು!

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + five =
Remember me
