ಬೆಂಗಳೂರು:ಹೈಕಮಾಂಡ್​ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಇಂದಿಗೆ(ಜು.26) 2 ವರ್ಷ. ಈ ಹಿನ್ನೆಲೆ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶದಲ್ಲಿಯೇ ಇಂದು ಬೆಳಗ್ಗೆ ರಾಜೀನಾಮ ಘೋಷಿಸಿದ್ದ ಬಿಎಸ್​ವೈ, ಸಚಿವ ಸಂಪುಟ ಸದಸ್ಯರೊಂದಿಗೆ ಊಟ ಮಾಡಿದರು. ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಸದ್ಯ ನೂತನ ಸಿಎಂ ಆಯ್ಕೆ ಆಗುವವರೆಗೂ ಯಡಿಯೂರಪ್ಪ ಅವರೇ ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. ಮಂಗಳವಾರ(ನಾಳೆ) ಬೆಳಗ್ಗೆ 9.30ಕ್ಕೆ ಬಿಜೆಪಿಯ ಪಾರ್ಲಿಮೆಂಟರಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನೂತನ ಸಿಎಂ ಯಾರು ಎಂಬುದಕ್ಕೆ ಸ್ಪಷ್ಟತೆ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ನಾನು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ರಾಜ್ಯದ ಜನರ ಬೆಂಬಲದಿಂದ, ಪ್ರಧಾನಿ ಶ್ರೀ@narendramodi, ರಾಷ್ಟ್ರೀಯ ಅಧ್ಯಕ್ಷ ಶ್ರೀ@JPNadda, ಗೃಹ ಸಚಿವ ಶ್ರೀ@AmitShahರವರ ಸಹಕಾರದಿಂದ, ಎಲ್ಲಾ ಶಾಸಕರು, ಪಕ್ಷದ ನೆರವಿನಿಂದ 2 ವರ್ಷ ಅಭಿವೃದ್ಧಿ ಪರ ಆಡಳಿತ ನೀಡಲು ಶಕ್ತಿಮೀರಿ ಪ್ರಯತ್ನ ನಡೆಸಿದ ತೃಪ್ತಿ ನನಗಿದೆ.
— B.S.Yediyurappa (@BSYBJP)July 26, 2021

ಕಣ್ಣೀರು ಹಾಕುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬಿಎಸ್​ವೈ

ದುಂಡಗೆ, ದಪ್ಪಗಿದ್ದ ಕಮಲಾಗೆ ಸಹಪಾಠಿಗಳು ಕೊಟ್ಟ ಕೀಟಲೆ ಅಷ್ಟಿಷ್ಟಲ್ಲ! ಅದೇ ಬಾಲೆ ಜಯಂತಿ ಆದ ಇಂಟ್ರೆಸ್ಟಿಂಗ್​ ಸ್ಟೋರಿ ಇದು

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen + one =
Remember me
