ಕೊಪ್ಪಳ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನನ್ನನ್ನು ವಿಲನ್ ಮಾಡಬೇಡಿ. ಅವರ ವಿರುದ್ಧ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್​ ಮಾರ್ಮಿಕವಾಗಿ ನುಡಿದರು. ಆ ಮೂಲಕ ಯಡಿಯೂರಪ್ಪ ವಿರುದ್ಧ ಧ್ವನಿ ಎತ್ತಿದರೆ ಆ ಪಕ್ಷದಲ್ಲಿ ಉಳಿಗಾಲ ಇಲ್ಲ ಎಂದು ಸೂಚ್ಯವಾಗಿ ಹೇಳಿದರೇ ಸಚಿವರು ಎಂಬ ಚರ್ಚೆ ಸಾರ್ವಜನಿಕವಲಯದಲ್ಲಿ ಶುರುವಾಗಿದೆ.
ಕೊಪ್ಪಳದ ಅಂಜಿನಾದ್ರಿ ಬೆಟ್ಟದ ಬಳಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಯೋಗೀಶ್ವರ್​, ಬಿಎಸ್​ವೈ ನಮ್ಮ ನಾಯಕರು. ಅವರನ್ನು ಟಾರ್ಗೆಟ್ ಮಾಡುವುದು, ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನ ನಾವು ಮಾಡುತ್ತಿಲ್ಲ. ನಮ್ಮಲ್ಲಿ ಆಂತರಿಕ ಸಮಸ್ಯೆಗಳಿವೆ. ಹಾಗಾಗಿ ನಾಯಕರ ಮುಂದೆ ಹೇಳಿಕೊಳ್ಳಲು ದೆಹಲಿಗೆ ಹೋಗುತ್ತಿದ್ದೇವೆಯೇ ವಿನಃ ಬೇರೆ ವಿಷಯವಿಲ್ಲ. ಫಲಿತಾಂಶ ಯಾವಾಗ ಬರುತ್ತೆ ಎಂದು ನೋಡೋಣ. ಪಕ್ಷದ ಹಿರಿಯರು ಯಾವಾಗ ತೀರ್ಮಾನ ಮಾಡ್ತಾರೋ ಆವಾಗ ಬರುತ್ತೆ ಎಂದರು.ಇದನ್ನೂ ಓದಿರಿಹಾಸಿಗೆ ತೊಳೆಯುತ್ತಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರ ಪ್ರಾಣ ಹೊತ್ತೊಯ್ದ ಜವರಾಯ!
ಶಾಸಕ ಯತ್ನಾಳ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಭೇಟಿ ಕುರಿತು ಸ್ಪಷ್ಟನೆ ನೀಡಿದ ಯೋಗೀಶ್ವರ್​, ಪ್ರವಾಸೋದ್ಯಮ ಇಲಾಖೆ ಮೂಲಕವೇ ರಾಜ್ಯದಲ್ಲಿ ನಾಲ್ಕು ಕಡೆ ತ್ರೀಸ್ಟಾರ್ ಹೋಟೆಲ್ ಕಟ್ಟಲು ನಿರ್ಧರಿಸಿದ್ದೇವೆ. ಹಾಗಾಗಿ ಕಲಬುರಗಿಯಲ್ಲಿ ಹೋಟೆಲ್ ಆರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸುವ ಸಂಬಂಧ ಭೇಟಿ ಮಾಡಿರುವೆ. ಅವರ ಕ್ಷೇತ್ರದಲ್ಲಿ ತೆರಳುವಾಗ ಭೇಟಿ ಮಾಡಿರುವೆ ಅಷ್ಟೆ. ಬೇರೆ ವಿಚಾರವಿಲ್ಲ. ಯತ್ನಾಳ ಹಾಗೂ ನಾವು ಸಮಕಾಲೀನರು. ರಮೇಶ್​ ಜಾರಕಿಹೊಳಿಗೆ ಬಿಜೆಪಿಯ ಮೂವರಿಂದ ಅನ್ಯಾಯವಾಗಿದೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಅವರ ದೆಹಲಿ ಭೇಟಿ ವಿಷಯವೂ ನನಗೆ ಗೊತ್ತಿಲ್ಲ ಎಂದರು.
ಅಂಜನಾದ್ರಿ ಅಭಿವೃದ್ಧಿಗೆ ಸಾವಿರಾರು ಕೋಟಿ ಬೇಕು:ಅಂಜನಾದ್ರಿ ಬೆಟ್ಟವನ್ನು ಕೇವಲ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ನಾಲ್ಕಾರು ಇಲಾಖೆ ಸಹಯೋಗದಲ್ಲಿ ಅಭಿವೃದ್ಧಿ ಮಾಡಬೇಕಿದೆ. ಇದಕ್ಕೆ ಸಾವಿರಾರು ಕೋಟಿ ರೂ. ಬೇಕಾಗುತ್ತದೆ. ಇಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದೆ. ಈ ದೃಷ್ಟಿಯಿಂದ ಹಲವು ಸಚಿವರು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಯೋಗೀಶ್ವರ್​ ಹೇಳಿದರು, ಅಂಜನಾದ್ರಿಯಲ್ಲಿಯೇ ಹನುಮಂತ ಜನಿಸಿದ್ದು ಎನ್ನುವುದಕ್ಕೆ ಇಲ್ಲಿ ಹಲವು ಸಾಕ್ಷಿ, ಪುರಾವೆಗಳಿವೆ. ಪೌರಾಣಿಕ, ಐತಿಹಾಸಿ ಹಿನ್ನೆಲೆ ಇದೆ. ಸುಮ್ನೆ ಯಾರೋ ಹೇಳುತ್ತಾರೆ ಎಂದು ನಾವು ಸುಮ್ಮನಿರೋದಲ್ಲ. ಅಂಜನಾದ್ರಿಯಲ್ಲಿಯೇ ಹನುಮಂತ ಜನಿಸಿದ್ದು ಎಂಬುದು ಸರ್ಕಾರದ ನಿಲುವೂ ಆಗಿದೆ. ಅಂಜನಾದ್ರಿ ಮಾಸ್ಟರ್ ಪ್ಲ್ಯಾನ್ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದರು.
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಹಸುವಿನ ಮೈ ತೊಳೆಯತ್ತಿರುವಾಗಲೇ ಬಾಲಕರಿಬ್ಬರ ದುರಂತ ಸಾವು!

ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಒಂದೇ ಕುಟುಂಬದ ನಾಲ್ವರು ಸಹೋದರರ ಪ್ರಾಣ ಹೊತ್ತೊಯ್ದ ಜವರಾಯ! ಬೆಚ್ಚಿಬೀಳಿಸುತ್ತೆ ಆ ಸಂಜೆಯ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + twenty =
Remember me
