ಹಾಸನ :ಮಸೀದಿಗೆ ನುಗ್ಗಿದ ಖತರ್ನಾಕ್ ಕಳ್ಳ ಕಚೇರಿಯಲ್ಲಿದ್ದ ಕಂಪ್ಯೂಟರ್, ಕ್ಯಾಮೆರಾ ಹೊತ್ತೊಯ್ದಿರುವ ಘಟನೆ ಹಾಸನ ನಗರದ, ಶರೀಫ್ ಕಾಲೋನಿಯಲ್ಲಿ ನಡೆದಿದೆ.
ತಡರಾತ್ರಿ ಖುಬಾ ಮಸೀದಿಗೆ ನುಗ್ಗಿರುವ ಕಳ್ಳ, ಮಸೀದಿಯ ಮುಖ್ಯದ್ವಾರದ ಬೀಗ ಮುರಿದು ಹುಂಡಿ ಕದಿಯಲು ಯತ್ನಿಸಿದ್ದಾನೆ. ಸಾಧ್ಯವಾಗದಿದ್ದಾಗ, ನಂತರ ಮಸೀದಿಯ ಕಚೇರಿ ಬೀಗ ಮುರಿದು ಒಳಗೆ ಪ್ರವೇಶಿಸಿ,ಕಂಪ್ಯೂಟರ್ ಹಾಗೂ ಕೆನೆನ್ ಕ್ಯಾಮೆರಾ ಕದ್ದೊಯ್ದಿದಿದ್ದಾನೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮಳೆ ಆರ್ಭಟ; ನೀರು ನುಗ್ಗಿ ನಟ ಜಗ್ಗೇಶ್ BMW ಕಾರು ಮುಳುಗಡೆ
ಕಳೆದ ಮೂರು ತಿಂಗಳ ಅವಧಿಯಲ್ಲಿ ಇದೇ ಮಸೀದಿಯಲ್ಲಿ ಮೂರನೇ ಭಾರಿ ಕಳ್ಳತನವಾಗುತ್ತಿದೆ. ಸುಮಾರು ಮೂರು ಲಕ್ಷ ರೂ. ಬೆಲೆ ಬಾಳುವ ಕಂಪ್ಯೂಟರ್, ಕೆಮೆರಾ ಕಳುವಾಗಿದೆ. ರಾತ್ರಿ ಮಳೆ ಬರುತ್ತಿದ್ದ ಕಾರಣ ಪ್ರಮುಖ ಪತ್ರಿಕೆಯ ಛಾಯಾಗ್ರಾಹಕ ಅತೀಕ್ ಉರ್ ರೆಹಮಾನ್ ತಮ್ಮ ಕ್ಯಾಮೆರಾವನ್ನು ಮಸೀದಿಯ ಕಚೇರಿಯಲ್ಲಿಟ್ಟು ಮನೆಗೆ ತೆರಳಿದ್ದರು. ಆ ಕ್ಯಾಮೆರಾದೊಂದಿಗೆ ಕಳ್ಳ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಕೆಮ್ಮಿನ ಸಿರಪ್ ಬಾಟಲಿಗಳು ವಶ; ಮೂವರು ಅರೆಸ್ಟ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 7 =
Remember me
