ತುಮಕೂರು:ಎಲ್ಲೆಡೆಯೂ ನ್ಯೂ ಇಯರ್ ಪಾರ್ಟಿ ರಂಗೇರುತ್ತಿದೆ. ಹೊಸ ಸಂವತ್ಸವರನ್ನು ಬರಮಾಡಿಕೊಳ್ಳಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಅದರಲ್ಲೂ ಗೋವಾದಲ್ಲಿ ಹೊಸ ವರ್ಷದ ಪಾರ್ಟಿ ಸದ್ದು ಜೋರಾಗಿರುತ್ತದೆ. ಸಮುದ್ರ ಕಿನಾರೆಯಲ್ಲಿ ಹೊಸ ವರ್ಷದ ನಿಮಿತ್ತ ದೇಶ, ವಿದೇಶಗಳಿಂದ ಬಂದು ಒಟ್ಟಾಗುತ್ತಾರೆ.
ಇದೀಗ ಹೊಸ ವರ್ಷದ ಪಾರ್ಟಿ ಗುಂಗಿನಲ್ಲಿ ಗೋವಾಕ್ಕೆ ತೆರಳುತ್ತಿದ್ದ ನಾಲ್ವರು ಟೆಕ್ಕಿಗಳು ಕೂದಲೆಳೆ ಅಂತರದಲ್ಲಿ ಸಾವಿನ ದವಡೆಯಿಂದ ಪಾರಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ದಾರಿ ಮಧ್ಯೆ ಕಾರಿನಿ ಸ್ಟೇರಿಂಗ್ ಲಾಕ್ ಆಗಿದೆ ಎಂದು ಕೆಳಗಿಳಿದು ಪರಿಶೀಲಿಸಿದ್ದಾರೆ.
ಪರಿಶೀಲಿಸುತ್ತಿದ್ದಂತೆ ಏಕಾಏಕಿ ಕಾರಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆ ರಸ್ತೆ ಬದಿ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಆಂಧ್ರ ಮೂಲದ ಪ್ರಾಯಾಣಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ದೊಡ್ಡ ಆಲದಮರದ ಬಳಿ ಈ ಘಟನೆ ನಡೆದಿದೆ. ಕಾರಿನ ಬ್ಯಾಟರಿಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಆಗಿರೋ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
