ತುಮಕೂರು:ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದ್ದು, 4 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರೆಲ್ಲರೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಎನ್ನಲಾಗಿದೆ.
ಶನಿವಾರ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, 25ಕ್ಕೂ ಹೆಚ್ಚು ಜನ ಮಂದಿ ಗಂಭೀರ ಗಾಯಗೊಂಡಿದ್ದಾರೆ. ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಮೃತದೇಹಗಳು ರಸ್ತೆ, ರಸ್ತೆ ಬದಿ… ಹೀಗೆ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು. ಗಂಭೀರಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಬಸ್​ ಬಳಿಕ ಪಲ್ಟಿಯಾಗಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಪೇದೆ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್: ಇಬ್ಬರು ಪತ್ರಕರ್ತರು, ASI ವಿರುದ್ಧ ಎಫ್​ಐಆರ್​! ಡೆತ್​ನೋಟಲ್ಲಿದೆ ಸ್ಫೋಟಕ ರಹಸ್ಯ

ತುಮಕೂರಿನ ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕತ್ತರಿಸಿದ ಗಂಡ: ನೋವಲ್ಲೂ ಆಕೆ ಬಾಯ್ಬಿಟ್ಟ ರಹಸ್ಯ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
