ಹುಲಿಯೂರುದುರ್ಗ:ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಮತ್ತು ದೇವಸ್ಥಾನಕ್ಕೆ ತೆರಳುತ್ತಿದ್ದ ಆಟೋ ನಡುವೆ ಶನಿವಾರ ಬೆಳಗ್ಗೆ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಅರ್ಜುನಹಳ್ಳಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಕುಣಿಗಲ್ ಪಟ್ಟಣದಲ್ಲಿ ಶನಿವಾರ ಜೆಡಿಎಸ್​ನ ‘ಜನತಾ ಜಲಧಾರೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರುತ್ತಿದ್ದ ಬಸ್​ ಮತ್ತು ಒಂದೇ ಕುಟುಂಬದ ಐವರನ್ನು ದೇಗುಲಕ್ಕೆ ಕರೆದೊಯ್ಯುತ್ತಿದ್ದ ಆಟೋ ನಡುವೆ ಮಾರ್ಗಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ರಸ್ತೆ ಪಕ್ಕದ ಗದ್ದೆಗೆ ಬಸ್​ ಮಗುಚಿದೆ. ಆಟೋದಲ್ಲಿದ್ದ ಗೌಡಗೆರೆ ಗ್ರಾಮದ ರಾಮಯ್ಯ(60) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಟೊದಲ್ಲಿದ್ದ ಸುರೇಶ್(30), ಪ್ರೀತಮ್ (12), ಮನಿಷಾ(11), ಮೌನಿತ್(7) ಅವರ ಕೈ-ಕಾಲು ಮುರಿದು ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಾಳುಗಳನ್ನು ಬೆಳ್ಳೂರು ಕ್ರಾಸ್​ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್​ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪಿಎಸ್ಐ ಚೇತನ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಡೀ ರಾತ್ರಿ ಗಂಡನ ಶವದ ಪಕ್ಕ ಮಲಗಿ ಹೈಡ್ರಾಮ… ಒಳ ಉಡುಪಲ್ಲಿ ಪತ್ನಿ ಬಚ್ಚಿಟ್ಟುಕೊಂಡ ಮಾಂಗಲ್ಯದ ಹಿಂದಿತ್ತು ಸ್ಫೋಟಕ ರಹಸ್ಯ

ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 14 =
Remember me
