ಬಳ್ಳಾರಿ:ನಾನು ಕೇಳಿರೋದೇ ಒಂದು, ಕೊಟ್ಟಿರೋದೇ ಮತ್ತೊಂದು. ನನಗೆ ಕೊಟ್ಟಿರುವ ಖಾತೆಯನ್ನು ಬದಲಾವಣೆ ಮಾಡಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೇಳುವೆ. ನನ್ನಿಷ್ಟದ ಖಾತೆ ಕೊಡದಿದ್ರೆ ನಾನು ಶಾಸಕನಾಗಿ ಉಳಿಯುವೆ ಎಂದು ಸಚಿವ ಆನಂದ್​ ಸಿಂಗ್​ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನಗೊಂಡ ಆನಂದ್​ ಸಿಂಗ್​, ಬಿಜೆಪಿ ಸರ್ಕಾರ ಬರಲು ಮೊದಲು ರಾಜೀನಾಮೆ ಕೊಟ್ಟದ್ದು ನಾನು. ಆ ಬಗ್ಗೆ ಎಲ್ಲರಿಗೂ ಗೊತ್ತಿದೆ. ನನ್ನಂತೆ ಹಲವರು ರಾಜೀನಾಮೆ ನೀಡಿದ ಬಳಿಕ ಸರ್ಕಾರ ರಚನೆಯಾಗಿದೆ ಎಂದರು.
ಆನಂದ್​ ಸಿಂಗ್​ಗೆ ಪ್ರವಾಸೋದ್ಯಮ ಖಾತೆ ಕೊಡಲಾಗಿದೆ. ಈ ಖಾತೆ ಕೊಟ್ಟಿದ್ದಕ್ಕೆ ಬೇಸರಗೊಂಡಿರುವ ಆನಂದ್​ ಸಿಂಗ್​, ನನಗೆ ನಿರಾಶೆ ಆಗಿದೆ. ನಾನು ಕೇಳಿದ ಖಾತೆ ಕೊಡದಿದ್ದಕ್ಕೆ ಬೇಸರ ಆಗಿದೆ ಎಂದರು. ಮತ್ತೊಮ್ಮೆ ಸಿಎಂಗೆ ಮನವಿ ಮಾಡುವೆ. ಕೊಡದಿದ್ದರೆ ನನ್ನ ದಾರಿಯನ್ನ ನಾನೇ ನೋಡಿಕೊಳ್ಳುವೆ ಎಂದು ಆಕ್ರೋಶ ಹೊರಹಾಕುವ ಮೂಲಕ ರಾಜೀನಾಮೆ ನೀಡೋದೇ ಲೇಸು ಎನ್ನುವ ಹಂತಕ್ಕೆ ಬಂದಿದ್ದಾರೆ.
BREAKING NEWS| ಬೊಮ್ಮಾಯಿ ಕ್ಯಾಬಿನೆಟ್​ನಲ್ಲಿ ಯಾರಿಗೆ-ಯಾವ ಖಾತೆ? ಅಧಿಕೃತ ಪಟ್ಟಿ ಬಿಡುಗಡೆ

ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಮೈಸೂರು ವಿವಿ ಪ್ರಾಧ್ಯಾಪಕ ಕಾಮಪುರಾಣ ಕೇಸ್​ಗೆ ಸ್ಫೋಟಕ ತಿರುವು! ಮರುದಿನವೇ ಉಲ್ಟಾ ಹೊಡೆದ ಸಂತ್ರಸ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nineteen =
Remember me
