ಹನೂರು:ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜಡೇಕಲ್ಲಿನ ಬಳಿ ಕಾರಿನ ಚಕ್ರಕ್ಕೆ ಸಿಲುಕಿ 3 ವರ್ಷದ ಮಗುವೊಂದು ಮೃತಪಟ್ಟಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ವೆಂಕಟೇಶ್ ಪಾಟೀಲ್ ಅವರ ಪುತ್ರ ಧ್ರುವ(3) ಮೃತ ಮಗು. ವೆಂಕಟೇಶ್ ಪಾಟೀಲ್ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದು, ಭಾನುವಾರ ದೇವರಿಗೆ ಪೂಜೆ ಸಲ್ಲಿಸಲು ಸಂಬಂಧಿಕರೊಂದಿಗೆ ಇಬ್ಬರು ಮಕ್ಕಳನ್ನು ಮಹದೇಶ್ವರಬೆಟ್ಟಕ್ಕೆ ಕರೆತಂದಿದ್ದರು. ದೇಗುಲದಲ್ಲಿ ಪೂಜೆ ಸಲ್ಲಿಸಿ ರಾಜಗೋಪುರದ ಮುಂಭಾಗದ ಜಡೇಕಲ್ಲಿನ ಬಳಿ ಇದ್ದಾಗ, ಕಾರೊಂದು ವೇಗವಾಗಿ ಬಂದು ಮಗುವಿಗೆ ಡಿಕ್ಕಿ ಹೊಡೆದಿದೆ.
ಕಾರಿನ ಚಕ್ರಕ್ಕೆ ಮಗು ಸಿಲುಕಿ ತಲೆಯ ಭಾಗಕ್ಕೆ ತೀವ್ರ ಗಾಯವಾಗಿತ್ತು. ಕೂಡಲೇ ಮಗುವಿಗೆ ಮಲೆಮಹದೇಶ್ವರ ಬೆಟ್ಟದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತುರ್ತು ವಾಹನದ ಮೂಲಕ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಮಗು ಮೃತಪಟ್ಟಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ದೇವರ ದರ್ಶನಕ್ಕೆ ಬಂದವರ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಾಹನಗಳ ಪ್ರವೇಶಕ್ಕೆ ನಿಷೇಧ:ದೇಗುಲದ ಆವರಣಕ್ಕೆ ಖಾಸಗಿ ವಾಹನಗಳ ಪ್ರವೇಶಿಸುವುದನ್ನು ತಪ್ಪಿಸಲು ಪ್ರಾಧಿಕಾರದ ಆಡಳಿತ ಅಲ್ಲಲ್ಲಿ ಗೇಟ್‍ಗಳನ್ನು ಅಳವಡಿಸಿ ಸಿಬ್ಬಂದಿ ನಿಯೋಜಿಸಿದೆ. ಆದರೆ ಕೆಲ ಪ್ರಭಾವಿ ವ್ಯಕ್ತಿಗಳ ಒತ್ತಾಯಕ್ಕೆ ಮಣಿದು ಖಾಸಗಿ ವಾಹನಗಳನ್ನು ದೇಗುಲದ ಆವರಣಕ್ಕೆ ಬಿಡಲಾಗುತ್ತಿದೆ. ಪರಿಣಾಮ ಇಂತಹ ಘಟನೆ ನಡೆದಿದೆ. ಆದ್ದರಿಂದ ಪ್ರಾಧಿಕಾರದ ಅಧಿಕಾರಿಗಳು ಇನ್ನು ಮುಂದಾದರೂ ದೇಗುಲದ ಆವರಣಕ್ಕೆ ವಾಹನಗಳ ಪ್ರವೇಶವನ್ನು ನಿಷೇಧಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.
ಆಸೆ ಪಡುವುದರಲ್ಲಿ ತಪ್ಪಿಲ್ಲ… ಎನ್ನುತ್ತಲೇ ಡಿಕೆಶಿಗೆ ಸವಾಲು ಹಾಕಿದ ಎಚ್​ಡಿಕೆ

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಬೆಂಗಳೂರಲ್ಲಿ ಬೈಕ್​ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
