ಚಿತ್ರದುರ್ಗ:ಟೋಲ್ ಗೇಟ್​ನಲ್ಲಿ ನಿಂತಿದ್ದ ಗ್ಯಾಸ್​ ಟ್ಯಾಂಕರ್​ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳುನಲ್ಲಿ ಸಂಭವಿಸಿದೆ.
ಗುರುವಾರ ಬೆಳಗ್ಗೆ ಗುಯಿಲಾಳು ಟೋಲ್​ ಗೇಟ್​ನಲ್ಲಿ ಗ್ಯಾಸ್​ ಟ್ಯಾಂಕರ್​ ನಿಂತಿತ್ತು. ವೇಗವಾಗಿ ಬಂದ KA22 P0362 ನಂಬರ್​ನ ಕಾರು ಹಿಂಬದಿಯಿಂದ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಮೃತರ ಗುರುತು ಇನ್ನೂ ಪತ್ತೆ ಆಗಿಲ್ಲ. ಮೃತದೇಹಗಳನ್ನು ಸ್ಥಳೀಯ ಶವಾಗಾರಕ್ಕೆ ರವಾನಿಸಲಾಗಿದೆ. ಬೀಕರ ಅಪಘಾತದ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಬಿದ್ದ ಕಾರು! ಗಂಡನ ಕಣ್ಣೆದುರಲ್ಲೇ ಪತ್ನಿ ದುರ್ಮರಣ, ಬೆಚ್ಚಿಬಿದ್ದ ಸ್ಥಳೀಯರು

4 ವರ್ಷದಿಂದ ಅಪ್ಪ ಲೈಂಗಿಕವಾಗಿ ಹಿಂಸಿಸ್ತಿದ್ದಾನೆ, ಈ ನರಕ ಸಹಿಸೋಕೆ ಆಗ್ತಿಲ್ಲಮ್ಮ… ಶಿವಮೊಗ್ಗದಲ್ಲಿ ತಾಯಿ-ಮಗಳ ನರಳಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
