ಬಾಗಲಕೋಟೆ:ಮದುವೆ ಸಂಭ್ರಮದಲ್ಲಿದ್ದ ಕುಟುಂಬದ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದು, ನವ ದಂಪತಿ ಮತ್ತು ಅತ್ತಿಗೆ ಮೂವರೂ ದುರಂತ ಅಂತ್ಯ ಕಂಡಿದ್ದಾರೆ. ಮದುವೆ ಮನೆಯಲ್ಲೀಗ ಸೂತಕ ಆವರಿಸಿದ್ದು, ಮೂವರ ಸಾವಿನ ಸುದ್ದಿ ಕೇಳಿದ ಸಂಬಂಧಿಕರು, ಗ್ರಾಮಸ್ಥರು, ‘ಅಯ್ಯೋ ದೇವರೇ, ನೀನೆಂಥಾ ಕ್ರೂರಿ?’ ಎಂದು ಹಿಡಿಶಾಪ ಹಾಕುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸದ್ದಾಂ ರಾಜೇಸಾಬ ಸೊನ್ನದ ಜಾತಗಾರ(27) ಮತ್ತು ಇವರ ಪತ್ನಿ ಸಲೀಮಾ ಸದ್ದಾಂ(25) ಹಾಗೂ ಸದ್ದಾಂ ಅವರ ಅಣ್ಣನ ಪತ್ನಿ ರೇಷ್ಮಾ ಇಸ್ಮಾಯಿಲ್ (26) ಮೃತ ದುರ್ದೈವಿಗಳು. ಕಳೆದ ಜುಲೈ 15ರಂದು ಸದ್ದಾಂ ಮತ್ತು ಸಲೀಮಾ ಮದುವೆ ನಡೆದಿತ್ತು. ಇದಾದ ಬಳಿಕ ಸಂಬಂಧಿಕರ ಮದುವೆಗೆಂದು ಜಾತಗಾರ ಕುಟುಂಬದ ಇಬ್ಬರು ಮಕ್ಕಳು ಸೇರಿ 7 ಮಂದಿ ಆಂಧ್ರದ ಕಡಪಗೆ ಕಾರಿನಲ್ಲಿ ಹೋಗಿದ್ದರು.
ಇಂದು(ಶನಿವಾರ) ಜಾತಗಾರ ಕುಟುಂಬ ಕಾರಿನಲ್ಲಿ ವಾಪಸ್​ ಮುಧೋಳಕ್ಕೆ ಬರುವ ಮಾರ್ಗಮಧ್ಯೆ ಆಂಧ್ರದ ನೆಲ್ಲೂರು ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನವದಂಪತಿ ಸದ್ದಾಂ-ಸಲೀಮಾ, ಅತ್ತಿಗೆ ರೇಷ್ಮಾ ಮೂವರು ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾವವಿಂದ ಕಂಗೆಟ್ಟ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಮೈಸೂರು ವಿವಿ ಪ್ರಾಧ್ಯಾಪಕ ಕಾಮಪುರಾಣ ಕೇಸ್​ಗೆ ಸ್ಫೋಟಕ ತಿರುವು! ಮರುದಿನವೇ ಉಲ್ಟಾ ಹೊಡೆದ ಸಂತ್ರಸ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − two =
Remember me
