ಚಿತ್ರದುರ್ಗ:ಅಪಘಾತಕ್ಕೀಡಾಗಿ ಮೃತಪಟ್ಟ ತಂಗಿಯ ಶವವನ್ನ ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗಮಧ್ಯೆ ದುರಂತ ಅಂತ್ಯ ಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರಿನ ರಾಮು ಮುದ್ದಿಗೌಡರ್(56) ಮತ್ತು ಇವರ ಸಹೋದರಿ ರೇಣುಕಾ ಮೃತರು. ಮೂರು ದಿನದ ಹಿಂದೆ ರೇಣುಕಾಗೆ ಅಪಘಾತವಾಗಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಮು ಕರೆದೊಯ್ದಿದ್ದರು. ಚಿಕಿತ್ಸೆ ಫಲಿಸದೆ ರೇಣುಕಾ ಗುರುವಾರ ಮೃತಪಟ್ಟಿದ್ದರು. ಮೃತದೇಹವನ್ನು ಆಂಬುಲೆನ್ಸ್​ನಲ್ಲಿ ತರುತ್ತಾ, ಕಾರಿನಲ್ಲಿ ರಾಮು ಹಿರೇಕೆರೂರಿಗೆ ಬರುತ್ತಿದ್ದರು.

ಮಾರ್ಗಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ರಾತ್ರಿ ಟಿಪ್ಪರ್ ಹಾಗೂ ರಾಮು ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಪ್ಪರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ರಾಮು ಗಂಬೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕಲಿಲ್ಲ. ರೇಣುಕಾಳ ಸಾವಿನ ಸುದ್ದಿಯನ್ನೇ ಅರಗಿಸಿಕೊಳ್ಳದೆ ಕಣ್ಣೀರು ಹಾಕುತ್ತಿದ್ದ ಕುಟುಂಬ ರಾಮು ಸಾವಿನ ಸುದ್ದಿ ಕೇಳಿ ಕಂಗಾಲಾಗಿದೆ.
ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮು, ಹಿರೇಕೆರೂರು ತಾಲೂಕು ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಹಿರೇಕೆರೂರ ತಾಲೂಕು ಕಸಾಪ ಅಧ್ಯಕ್ಷರಾಗಿದ್ದ ರಾಮು, ಹಿರೇಮೊರಬ ಗ್ರಾಮದ ವಿಎಸ್ಎಸ್ ಬ್ಯಾಂಕ್‌ನ ಅಧ್ಯಕ್ಷರಾಗಿ, ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಕೆಲಸ ಮಾಡುತ್ತಿದ್ದರು.
ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ

ನನ್ನ ಜೀವ ಉಳಿಸಲು ದೇವರೇ ಅಧಿಕಾರದಿಂದ ಕೆಳಗಿಳಿಸಿದ! ಆ 17 ಮಂದಿ ನನ್ನ ಜೀವ ಉಳಿಸಿದ ಪುಣ್ಯಾತ್ಮರು…

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
