ತಿ.ನರಸೀಪುರ:ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಶುಕ್ರವಾರ ತಿ.ನರಸೀಪುರ ಠಾಣೆಗೆ ದೂರು ನೀಡಿದ್ದಾರೆ.
ಕೊಡಗಿನಲ್ಲಿ ಮಾಧ್ಯಮದವರ ಜತೆ ಮಾತನಾಡುವ ಭರದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಒಡ್ಡಿದ್ದಾರೆ. ನಮ್ಮ ಕಾರ್ಯಕರ್ತರನ್ನು ಬೀದಿಗಿಳಿಸಿದರೆ ಮುಖ್ಯಮಂತ್ರಿ ಕೂಡ ಓಡಾಡದಂತೆ ಆಗುತ್ತದೆ ಎಂದು ಹೇಳಿದ್ದಾರೆ. ಹಾಗಾಗಿ ಅವರನ್ನು ಬಂಧಿಸಬೇಕು ಎಂದು ತೋಟದಪ್ಪ ಬಸವರಾಜು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಸಿದ್ದರಾಮಯ್ಯ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಧರ್ಮವಾರು ಜನರನ್ನು ಎತ್ತಿಕಟ್ಟುವ ಕೆಲಸ ಮಾಡಿ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ. ಹಾಗಾಗಿ ಸಮಾಜದ ಹಿತವನ್ನು ಕದಡುವ ಹೇಳಿಕೆಗಳನ್ನು ಕಾಂಗ್ರೆಸ್​ ನಾಯಕರು ನೀಡುತ್ತಿದ್ದಾರೆ ಎಂದು ಮಾಧ್ಯಮಗಳೊಂದಿಗೆ ಮಾತನಾಡುತ್ತ ದೂರಿದರು.
ಮಳೆ ಹಾನಿಪೀಡಿತ ಪ್ರದೇಶಗಳ ವೀಕ್ಷಣೆಗೆಂದು ನಿನ್ನೆ(ಗುರುವಾರ) ಕೊಡಗು ಜಿಲ್ಲೆಗೆ ಪ್ರವಾಸ ಹೋದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮಡಿಕೇರಿಯಲ್ಲಿ ಜನರಲ್​ ತಿಮ್ಮಯ್ಯ ಸರ್ಕಲ್​ ಬಳಿ ಸಿದ್ದು ಕಾರಿನತ್ತ ಮೊಟ್ಟೆ ಎಸೆದು ‘go back’ ಎಂದು ಆಕ್ರೋಶ ಹೊರಹಾಕಿದ್ದರು. ಸಿದ್ದರಾಮಯ್ಯ ಟಿಪ್ಪು ಶಿಷ್ಯ ಎಂದು ಘೋಷಣೆ ಕೂಗಿದ್ದರು. ಈ ಕುರಿತು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದರು.
ಕಾಂಗ್ರೆಸ್​ನಲ್ಲೂ ಕಾರ್ಯಕರ್ತರಿದ್ದಾರೆ, ನಮಗೂ ರಾಜಕೀಯ ಮಾಡೋಕೆ ಬರುತ್ತೆ: ಬಿಜೆಪಿ ವಿರುದ್ಧ ಸಿದ್ದು ಆಕ್ರೋಶ

ರೈಲ್ವೆ ಪೊಲೀಸರಿಗೆ ಶೋಲ್ಡರ್ ಲೈಟ್: ರಾಜ್ಯದಲ್ಲಿ ಪ್ರಥಮ ಬಾರಿಗೆ ಜಾರಿ

ಮಿನಿಷ್ಟ್ರು ಬಂದ್ರೂ ಮೇಷ್ಟ್ರು ಬರಲಿಲ್ಲ! ಬಿ.ಸಿ.ನಾಗೇಶ್ ಎದುರೇ ಅವ್ಯವಸ್ಥೆ ಬಯಲು, ಶಿಕ್ಷಕರಿಗೆ ನೋಟಿಸ್ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
