ಬೆಳಗಾವಿ:ಇತ್ತೀಚಿಗೆ ಬಳ್ಳಾರಿಯಲ್ಲಿ ಕರೊನಾ ವೈರಸ್​ನಿಂದ ಮೃತಪಟ್ಟ 9 ಜನರ ಶವವನ್ನು ಒಂದೇ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ್ದು, ಯಾದಗಿರಿಯ ಹೊನಗೇರಾದಲ್ಲಿ ಸೋಂಕಿತನ ಶವವನ್ನು ದರದರನೆ ಎಳೆದು ಗುಂಡಿಗೆ ಎಸೆದಿದ್ದ ದೃಶ್ಯ ಇಡೀ ದೇಶದ ಜನರನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಅಂತಹದ್ದೇ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.
ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಗರ ಮತ್ತು ರಾಯಬಾಗದ ಕರೊನಾ ಸೋಂಕಿತರಿಬ್ಬರು ಮೃತಪಟ್ಟಿದ್ದರು. ಅವರ ಶವಗಳನ್ನು ತೆರೆದ ಸ್ಥಳದಲ್ಲಿ ಸುಡಲಾಯಿತು. ಈ ವೇಳೆ ಚಿತೆಗೆ ಶವಗಳನ್ನು ಮಣ್ಣಿನಂತೆ ಸುರಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿರಿ9 ಲಕ್ಷ ರೂ. ಬಿಲ್ ಕಟ್ಟಿದರಷ್ಟೇ ಮೃತದೇಹ ಕೊಡೋದು… ಶವಕ್ಕಾಗಿ 30 ತಾಸು ಆಸ್ಪತ್ರೆ ಬಾಗಿಲು ಕಾದ ಕುಟುಂಬಸ್ಥರು!
ಬೆಳಗಾವಿಯ ಸದಾಶಿವನಗರ ಸ್ಮಶಾನದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಕರೊನಾ ಸೋಂಕಿನಿಂದ ಮೃತಪಟ್ಟವರ ದೇಹಗಳನ್ನು ಚಿತೆಗೆ ಎಸೆಯುವ ಮೂಲಕ ಬೆಳಗಾವಿಯ ಪಾಲಿಕೆ ಸಿಬ್ಬಂದಿ ಅಮಾನವೀಯತೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನಗರದಲ್ಲಿ ಕರೊನಾ ಸೋಂಕಿತರ ಸಾವು ದಿನದಿಂದ ದಿನಕ್ಕೆ ಹೆಚ್ವುತ್ತಲೇ ಇದ್ದು, ಶನಿವಾರದವರೆಗೆ 40 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನೂ 30 ವರ್ಷ ಕರೊನಾ ಹೋಗಲ್ಲ; ಬ್ರಹ್ಮಾಂಡ ಗುರೂಜಿ ಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 7 =
Remember me
