ಬೆಂಗಳೂರು:ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಕಳೆದ ತಿಂಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟಾರೆ ಯುವತಿಯರೇ ಮೇಲುಗೈ ಸಾಧಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಸಿಇಟಿ ಕೇಂದ್ರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಸಿಇಟಿ ಫಲಿತಾಂಶ ಪ್ರಕಟಿಸಿದರು. ಇಂಜಿನಿಯರಿಂಗ್, ಪಶುಸಂಗೋಪನೆ, ಕೃಷಿ ವಿಜ್ಞಾನ, ಫಾರ್ಮಸಿ, ಯೋಗ ಮತ್ತು ನ್ಯಾಚುರೋಪತಿ, ವೆಟರಿನರಿ ಕೋರ್ಸುಗಳಲ್ಲಿ ಮೊದಲ 10 ರ್ಯಾಂಕ್ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಸಚಿವರು ಪ್ರಕಟಿಸಿದರು. ಇಂಜಿನಿಯರಿಂಗ್ ವಿಭಾಗದಲ್ಲಿ ಯಲಹಂಕದ ನ್ಯಾಷನಲ್ ಪಬ್ಲಿಕ್ ಕಾಲೇಜಿನ ಅಪೂರ್ವ ತಂಡನ್ ಮತ್ತು ಯೋಗ ವಿಭಾಗದಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಾಲೆನ್ಸ್ ಕಾಲೇಜಿನ ಹರ್ಶಿಕೇಶ್, ಕೃಷಿ ವಿಭಾಗದಲ್ಲಿ ಎಚ್ಎಎಲ್ ಪಬ್ಲಿಕ್ ಶಾಲೆಯ ಅರ್ಜುನ್ ರವಿಶಂಕರ್ ಮೊದಲ ರ‍್ಯಾಂಕ್​ ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು.
ಇಂಜಿನಿಯರಿಂಗ್​, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 2,16,559 ವಿದ್ಯಾರ್ಥಿಗಳ ಪೈಕಿ 2,10,962 ಮಂದಿ ಭೌತಶಾಸ್ತ್ರ ಮತ್ತು 2,10,924 ಮಂದಿ ರಸಾಯನಶಾಸ್ತ್ರ ವಿಷಯ ಪರೀಕ್ಷೆಗೆ ಹಾಜರಾಗಿದ್ದರು. ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿದ ನಂತರ ಇಂಜಿನಿಯರಿಂಗ್ ಕೋರ್ಸ್​ಗೆ 171656 ಬ್ಯಾಂಕ್ ನೀಡಲಾಗಿದೆ. ಮುಂದುವರಿದು ಕೃಷಿ ಕೋರ್ಸ್​ಗೆ 139968 ಅಭ್ಯರ್ಥಿಗಳು, 142820 ಅಭ್ಯಥಿ್ಗಳು ಪಶುಸಂಗೋಪನೆಗೆ, 142750 ಮಂದಿ ಯೋಗ ಮತ್ತು ನ್ಯಾಚುರೋಪತಿ ಮತ್ತು 174568 ಅಭ್ಯರ್ಥಿಗಳು ಬಿ. ಫಾರ್ಮ ಕೋರ್ಸ್​ಗೆ ಮತ್ತು ಫಾರ್ಮ್-ಡಿ ಕೋರ್ಸ್​ಗೆ ಅರ್ಹತೆ ಪಡೆದಿದ್ದಾರೆ ಎಂದು ಸಚಿವರು ವಿವರಿಸಿದರು.
ಈಗಾಗಲೇ ಸಿಬಿಎಸ್​ಸಿ 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಎಲ್ಲ ಅಂಕಗಳ ಆಧಾರದಲ್ಲಿ ಅಂತಿಮ ರ್ಯಾಂಕ್​ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಕೆಇಎ ತಿಳಿಸಿದೆ. ಫಲಿತಾಂಶವನ್ನು ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​www.karresults.nic.inನಲ್ಲಿ ನೋಡಬಹುದು. ಫಲಿತಾಂಶದ ಜತೆ ಮೆರಿಟ್​ ಪಟ್ಟಿ ಕೂಡ ಪ್ರಕಟವಾಗಿದೆ. ಸುದ್ದಿಗೋಷ್ಠಿಯಲ್ಲಿ ವಾರ್ತಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ, ಅಧಿಕಾರಿ ರಮ್ಯಾ ಇದ್ದರು.
ಸಿಇಪಿ ಪರೀಕ್ಷೆಯಲ್ಲಿ ಟಾಪ್​ 9 ಸಾಧಕರ ಪಟ್ಟಿ ಇಲ್ಲಿದೆ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four + twelve =
Remember me
