ಹುಬ್ಬಳ್ಳಿ:ಕುಟುಂಬಸ್ಥರು ಮತ್ತು ಭಕ್ತರ ಆಕ್ರಂದನದ ನಡುವೆಯೇ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ನೆರವೇರಿತು. ಪತ್ನಿ ಅಂಕಿತಾ ಅವರ ಆಕ್ರಂದನ ಮುಗಿಲು ಮುಟ್ಟಿತ್ತು. ಗುರೂಜಿ ಅವರು ಪ್ರೀತಿಯಿಂದ ಸಾಕಿದ್ದ ಶ್ವಾನ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿರುವ ಗುರೂಜಿ ಅವರ ಹೊಲದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಕೊಟ್ರಯ್ಯ ಶಾಸ್ತ್ರಿಗಳ ನೇತೃತ್ವದಲ್ಲಿ ಅಂತ್ಯಕ್ರಿಯೆಯ ವಿಧಿವಿಧಾನ ನಡೆಯಿತು.

ಇದಕ್ಕೂ ಮುನ್ನ ಕಿಮ್ಸ್​ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಪಾರ್ಥಿವ ಶರೀರವನ್ನು ಸ್ವಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಕೆಲಕಾಲ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಕಂಬಿನಿ ಮಿಡಿಯುತ್ತಲೇ ಸಹಸ್ರಾರು ಮಂದಿ ಗುರೂಜಿ ಅವರ ಅಂತಿಮ ದರ್ಶನ ಪಡೆದರು.

ಗೂರೂಜಿ ಅವರು ಸಾಕಿದ್ದ ಪ್ರಿತೀಯ ನಾಯಿಯನ್ನೂ ಸ್ಥಳಕ್ಕೆ ಸಿಬ್ಬಂದಿ ಕರೆತಂದಿದ್ದರು. ಪಾರ್ಥಿವ ಶರೀರದ ಬಳಿ ಗುರೂಜಿಗಾಗಿ ಶ್ವಾನ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಗುರೂಜಿ ಅವರ ಪುತ್ರಿ ಸ್ವಾತಿ, ಅಣ್ಣನ ಮಗ ಸಂಜಯ ಅಂಗಡಿ ಅವರು ಅಂತಿಮ ವಿಧಿವಿಧಾನ ನೆರವೇರಿಸಿದರು.
ಶಾಸಕ ಶಂಕರಪಾಟೀಲ ಮುನೇನಕೊಪ್ಪ, ಸಿದ್ದ ಸಂಸ್ಥಾನ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್​ ಸೇರಿದಂತೆ ಸಾವಿರಾರು ಮಂದಿ ಚಂದ್ರಶೇಖರ ಗುರೂಜಿ ಅವರ ಅಂತಿಮ ದರ್ಶನ ಪಡೆದರು.
ಚಂದ್ರಶೇಖರ ಗುರೂಜಿ ಹಂತಕರ ಬಂಧನ: ಅಸಲಿ ವಿಚಾರ ಮುಚ್ಚಿಟ್ರಾ ಪೊಲೀಸರು?

ಹತ್ಯೆಗೂ ಮುನ್ನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಮುಂದೆ ಹಂತಕರ ಹೈಡ್ರಾಮ ಹೀಗಿತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 10 =
Remember me
