ರಾಮನಗರ:ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಿರುವ ಎಂಎಲ್​ಸಿ ಸಿ.ಪಿ.ಯೋಗೇಶ್ವರ್​, ಇದೀಗ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿ 14 ತಿಂಗಳು ಸಿಎಂ ಆಗಿದ್ದ ವೇಳೆ ರಾಸಲೀಲೆ ಆಡಿಕೊಂಡಿದ್ದರು. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ… ಎಂದು ಯೋಗೇಶ್ವರ್​ ಹೇಳಿದ್ದಾರೆ.
ಸೋಮವಾರ ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯೋಗೇಶ್ವರ್​, ನನ್ನಿಂದ ಯಾಕಪ್ಪ ಎಚ್​ಡಿಕೆ ಆಣಿಮುತ್ತುಗಳನ್ನು ಕೇಳ್ತೀರಾ? ನೇರಾ-ನೇರಾ ನನ್ನ ಮುಂದೆ ಕೂರಿಸಿ. ವೈಯಕ್ತಿಕ ಹಾಗೂ ಸಾರ್ವಜನಿಕ ವಿಚಾರಗಳನ್ನು ಬಹಿರಂಗವಾಗಿ ಮಾತಾಡೋಣ. 14 ತಿಂಗಳು‌ ಸಿಎಂ ಆಗಿದ್ದ ವೇಳೆ ಚನ್ನಪಟ್ಟಣಕ್ಕೆ ಎಚ್​ಡಿಕೆ ಬರ್ತಿರಲಿಲ್ಲ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ರಾಸಲೀಲೆ ಆಡಿಕೊಂಡಿದ್ರು. ಇದೀಗ ಚನ್ನಪಟ್ಟಣ ತಾಲೂಕಿಗೆ ಬಂದು ಜನರ ಮುಂದೆ ಕಣ್ಣೀರಿಟ್ಟು ನಾಟಕ ಮಾಡ್ತಿದ್ದಾರೆ. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನು ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ. ಎಚ್​ಡಿಕೆ ಬಹಿರಂಗ ಚರ್ಚೆಗೆ ಬರಲಿ, ನಾನೂ ಸಿದ್ಧನಿದ್ದೇನೆ. ನನ್ನ ಬಗ್ಗೆ ಏಕವಚನದಲ್ಲಿ ಮಾತಾಡಿದ್ರೆ, ನಾನೂ ಕೂಡ ಏಕವಚನದಲ್ಲೇ ಮಾತಾಡ್ತೀನಿ ಎಂದು ಕಿಡಿಕಾರಿದರು.(ದಿಗ್ವಿಜಯ ನ್ಯೂಸ್)
ಕಲಬುರಗಿಯಲ್ಲಿ ಘೋರ ದುರಂತ: ಗೋಧಿ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಪಿಯು ವಿದ್ಯಾರ್ಥಿನಿ ಸಾವು

ವಿಚ್ಛೇದನ ಕೇಳಿದ್ದ ಅಪ್ಪ-ಅಮ್ಮನನ್ನು ಜಡ್ಜ್​ ಎದುರೇ ಒಂದುಗೂಡಿಸಿದ ಮಗ! ಶಿವಮೊಗ್ಗದಲ್ಲಿ ಮನಮಿಡಿಯುವ ಘಟನೆ

ಬ್ಲೂಟೂತ್ ಬಳಸೋ ಜನರೇ ಎಚ್ಚರ! ​ನಿಮ್ಗೂ ಬರಬಹುದು ಆಪತ್ತು…

ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ರೆ ವಿಷಾದಿಸುವೆ… ಮಾಜಿ ಶಾಸಕರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆಶಿ

Sign in to your account
Please enter an answer in digits:fourteen − 11 =
Remember me
