ರಾಮನಗರ:ಚನ್ನಪಟ್ಟಣ ತಾಲೂಕಿನ ಗೌಡಗೆರೆಯ ಪ್ರಸಿದ್ಧ ಚಾಮುಂಡೇಶ್ವರಿ ಬಸವಪ್ಪನ ಪುಣ್ಯಕ್ಷೇತ್ರದಲ್ಲಿ ಅನಾವರಣಗೊಂಡಿರುವ ಅತಿ ಎತ್ತರದ ತಾಯಿ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಜು.31ರಂದು ಮಹಾ ಮಸ್ತಕಾಭಿಷೇಕ ನಡೆಯಲಿದ್ದು, ಬೊಂಬೆನಾಡು ಚನ್ನಪಟ್ಟಣ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ.
60 ಅಡಿ ಎತ್ತರದ ಸೌಮ್ಯ ಸ್ವಭಾವದ ಶ್ರೀ ಚಾಮುಂಡೇಶ್ವರಿ ವಿಗ್ರಹ ಕಳೆದ ವರ್ಷ ಉದ್ಘಾಟನೆಗೊಂಡಿತ್ತು. ವಿಗ್ರಹ ಪ್ರತಿಷ್ಠಾಪನೆಗೊಂಡು ವರ್ಷ ಪೂರೈಸಿದ್ದು, ಇದೇ ಮೊದಲ ಬಾರಿಗೆ ಮಹಾಮಸ್ತಕಾಭಿಷೇಕ ಹಮ್ಮಿಕೊಂಡಿರುವುದಾಗಿ ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್ ಗುರೂಜಿ ತಿಳಿಸಿದ್ದಾರೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ, ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಮಲ್ಲಿಕಾರ್ಜುನ ಮಠದ ಶ್ರೀ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ.
ಎಲ್ಲವೂ 1008ರಲ್ಲೇ ಬಳಕೆ:ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು, ಗುರುವಾರದಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ದೇವಿಯ ಮಸ್ತಕಾಭಿಷೇಕಕ್ಕೆ ಚಂದನ, ಕುಂಕುಮ, ಅರಿಶಿಣ, ಗಿಡಮೂಲಿಕೆಗಳ ಜಲ, ಹಾಲು, ಮೊಸರು, ತುಪ್ಪ, ಜೇನುತುಪ್ಪ, ಎಳನೀರು ಸೇರಿ 45 ಬಗೆಯ ವಸ್ತುಗಳು ಮತ್ತು ದ್ರವ್ಯಗಳನ್ನು ಬಳಸಲಾಗುತ್ತಿದೆ. ಪ್ರತಿಯೊಂದು ಪದಾರ್ಥವೂ 1008 ಲೀ. ಹಾಗೂ 1008 ಕೆ.ಜಿ. ಎಂಬುದು ವಿಶೇಷ. ಅಭಿಷೇಕದಲ್ಲಿ 5 ಕೆಜಿ ಕೇಸರಿ ಬಳಸುತ್ತಿದ್ದು, ಕಾಶ್ಮೀರದಿಂದ ತರಿಸಲಾಗಿದೆ. ಇನ್ನು ಗಂಗಾ- ಕಾವೇರಿ ಸೇರಿ ಪುರಾಣಗಳಲ್ಲಿ ಉಲ್ಲೇಖವಾಗಿರುವ ಸಪ್ತನದಿಗಳ ಪವಿತ್ರ ಜಲದಿಂದಲೂ ದೇವಿಗೆ ಅಭಿಷೇಕ ಮಾಡಲಾಗುವುದು. ಭಾನುವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳುವ ಮಹಾಮಸ್ತಕಾಭಿಷೇಕ ಸುವಾರು 10 ತಾಸು ನಿರಂತರವಾಗಿ ನಡೆಯಲಿದೆ ಎಂದು ಮಲ್ಲೇಶ್ ಗುರೂಜಿ ತಿಳಿಸಿದ್ದಾರೆ.
ಧಾರ್ಮಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಡಿ.ಕೆ.ಸುರೇಶ್, ಚಿತ್ರನಟರಾದ ಶಿವರಾಜ್‌ಕುಮಾರ್, ಸುದೀಪ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿ ಹಲವಾರು ಆಗಮಿಸಲಿದ್ದಾರೆ.
ಭಕ್ತರಿಗೆ ತೊಂದರೆಯಾಗದಂತೆ ತಾತ್ಕಾಲಿಕ ಶೌಚಗೃಹ, ದರ್ಶನಕ್ಕೆ ವ್ಯವಸ್ಥೆ, ಪ್ರಸಾದ ವಿನಿಯೋಗ, ಪಾರ್ಕಿಂಗ್ ವ್ಯವಸ್ಥೆ ಹಾಗೂ ಅಂಗವಿಕಲರು ಮತ್ತು ವೃದ್ಧರಿಗೆ ದೇವಾಲಯದವರೆಗೆ ಬರಲು ವೀಲ್‌ಚೇರ್ ವ್ಯವಸ್ಥೆ ಮಾಡಲಾಗಿದೆ. 300 ಸ್ವಯಂಸೇವಕರನ್ನು ನಿಯೋಜಿಸಲಾಗಿದೆ.
ಕಾಮನ್ವೆಲ್ತ್​ ಗೇಮ್ಸ್​ನಲ್ಲಿ ಪದಕ ಬೇಟೆ ಆರಂಭಿಸಿದ ಭಾರತ: ಬೆಳ್ಳಿಗೆ ಮುತ್ತಿಟ್ಟ ಸಂಕೇತ್​ ಸರ್ಗರ್​

ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಕುಣಿಗಲ್​ ಸರ್ಕಾರಿ ಆಸ್ಪತ್ರೆ ಮುಂದೆ ಬಾಣಂತಿ ಶವ ಇಟ್ಟು ಪ್ರತಿಭಟನೆ: ಹೆರಿಗೆ ವೇಳೆ ವೈದ್ಯರ ಎಡವಟ್ಟಿಗೆ ಮಹಿಳೆ ಸಾವು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 5 =
Remember me
