ಬೆಂಗಳೂರು:ಬಸವರಾಜ ಬೊಮ್ಮಾಯಿ ಆದ ನಾನು… ದೇವರ ಹೆಸರಿನಲ್ಲಿ ರಾಜ್ಯ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವೆ…
ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಾಂದ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಗೆಹ್ಲೋಟ್ ಅವರು ಸಿಎಂ ಬೊಮ್ಮಾಯಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಇಂದಿನಿಂದ ಬೊಮ್ಮಾಯಿ ರಾಜ್ಯಭಾರ ಶುರುವಾಗಲಿದೆ.

ಶಿಷ್ಯನ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ 30 ನಿಮಿಷ ಮೊದಲೇ ಬಿ.ಎಸ್​.ಯಡಿಯೂರಪ್ಪ ಹಾಜರಿದ್ದರು. ಬೊಮ್ಮಾಯಿ ಕುಟುಂಬಸ್ಥರು ಪ್ರಮಾಣವಚನ ಸ್ವೀಕರಿಸುವ ಕ್ಷಣವನ್ನು ಕಣ್ತುಂಬಿಕೊಂಡರು. ನೂತನ ಮುಖ್ಯಮಂತ್ರಿಗೆ ಜೈಕಾರ, ಘೋಷಣೆಗಳು ಮೊಳಗಿದವು. ಯಡಿಯೂರಪ್ಪ ಜತೆ ಬೊಮ್ಮಾಯಿ ಕುಟುಂಬಸ್ಥರು ವಿಕ್ಟರಿ ಸಿಂಬಲ್​ ತೋರಿಸಿ ಗೆಲುವಿನ ನಗೆ ಬೀರಿದರು. ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಬೊಮ್ಮಾಯಿ ಜತೆ ವೇದಿಕೆ ಮುಂಭಾಗ ಬಿಎಸ್ ವೈ ವಿಕ್ಟರಿ ಸಿಂಬಲ್ ತೋರಿಸಿದರು. ರಾಜಭವನ ಸುತ್ತ ಬಿಗಿಬಂದೋಬಸ್ತ್​ ಏರ್ಪಡಿಸಲಾಗಿತ್ತು.
ಇಂದಿನಿಂದ ಬೊಮ್ಮಾಯಿ ‘ರಾಜ್ಯ’ಭಾರ! ಸಮಸ್ಯೆಗಳನ್ನೇ ಹೊದ್ದು ಮಲಗಿದೆ ಹಾದಿ…

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 5 =
Remember me
