ಆನೇಕಲ್:ಹುಲ್ಲಹಳ್ಳಿಯ ಕ್ರೈಸ್ಟ್ ಕಾಲೇಜಿನ 7 ವಿದ್ಯಾರ್ಥಿಗಳು ಕುಡಿದ ಅಮಲಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಾ ಹುಚ್ಚಾಟ ಮೆರೆದಿದ್ದು, ಆನೇಕಲ್​ನ ಚಿನ್ನಯ್ಯನಪಾಳ್ಯದ ಭುಜಂಗ ದಾಸಯ್ಯನ ಕೆರೆಗೆ ಕಾರು ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಎಸ್​ಸಿಯುವಿ ಕಾರಿನಲ್ಲಿ ಅತಿವೇಗವಾಗಿ ಕೆರೆಯ ಕಟ್ಟೆ ಮೇಲೆ ಕಾರನ್ನು ವಿದ್ಯಾರ್ಥಿಗಳು ಚಲಾಯಿಸಿಕೊಂಡು ಬಂದಿದ್ದು, ನಿಯಂತ್ರಣ ತಪ್ಪಿದ ಕಾರು ಕೆರೆಗೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ 7 ಜನರ ಪೈಕಿ ಇಬ್ಬರು ಘಟನೆ ಸಂಭವಿಸುತ್ತಿದ್ದಂತೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಐವರನ್ನು ರಕ್ಷಿಸಲಾಗಿದೆ.
ಇವರೆಲ್ಲರೂ ಕ್ರೈಸ್ಟ್ ಕಾಲೇಜಿನ ಪದವಿ ವಿದ್ಯಾರ್ಥಿಗಳು. ಇತ್ತೀಚಿಗೆ ಸುರಿದ ಮಳೆಯಿಂದಾಗಿ ಕೆರೆ ತುಂಬಿ ಕೋಡಿ ಹರಿಯುತ್ತಿದೆ. ಕೆರೆಗೆ ಬಿದ್ದ ಕಾರನ್ನು ಜೆಸಿಬಿ ಸಹಾಯದಿಂದ ಮೇಲೆಕ್ಕೆತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮನೆ ಬಾಗಿಲಿಗೆ ಬಂದ ಗಿಫ್ಟ್​ ಕೂಪನ್​ ಆಸೆಗಾಗಿ 65 ಸಾವಿರ ರೂ. ಕಳೆದುಕೊಂಡ ಮಧುಗಿರಿಯ ಕುರಿಗಾಹಿ!

ಬಿಡದಿಯಲ್ಲಿ ನಕಲಿ ಮೊಮ್ಮಗಳನ್ನು ಬ್ಯಾಂಕ್​ಗೆ ಕರೆತಂದು 5 ಲಕ್ಷ ರೂ. ಕಬಳಿಸಿದ ದಂಪತಿ! ಇಂಥವರೂ ಇರ್ತಾರೆ ಹುಷಾರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
