| ಕಿರುವಾರ ಎಸ್.ಸುದರ್ಶನ್ ಕೋಲಾರಚಿನ್ನದ ನಾಡು, ಬಯಲುಸೀಮೆ ಎಂದು ಕರೆಯಲ್ಪಡುವ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಯು ಈ ಬಾರಿ ಸ್ಥಳೀಯ ಹಾಗೂ ಹೊರಗಿನವರ ನಡುವೆ ಸ್ಪರ್ಧೆ ಎಂದೇ ಗುರುತಿಸಿಕೊಳ್ಳುತ್ತಿದೆ. ಹಲವು ರಾಜಕೀಯ ತಿರುವುಗಳ ನಡುವೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಅಖಾಡದಲ್ಲಿದ್ದಾರೆ. ಅಳಿಯ ಚಿಕ್ಕಪೆದ್ದನ್ನ ಅವರಿಗೆ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಳ್ಳಲು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮುಂದಾಗಿದ್ದರು. ಮತ್ತೊಂದು ಕಡೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್​ಕುಮಾರ್ ಮತ್ತು ತಂಡದವರು ಬಲಗೈ ಸಮುದಾಯಕ್ಕೆ ಟಿಕೆಟ್​ಗಾಗಿ ಒತ್ತಾಯ ಮಾಡಿ, ಕೆ.ಎಚ್.ಮುನಿಯಪ್ಪ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದಿದ್ದರು. ಎರಡೂ ಗುಂಪುಗಳ ತೀವ್ರ ತಿಕ್ಕಾಟದಿಂದ ತಪ್ಪಿಸಿಕೊಳ್ಳಲು ಇಬ್ಬರನ್ನೂ ಬಿಟ್ಟು ಬೆಂಗಳೂರಿನ ನಿವಾಸಿ ಕೆ.ವಿ. ಗೌತಮ್ ಅವರನ್ನು ಹೈಕಮಾಂಡ್ ಕಣಕ್ಕೆ ಇಳಿಸಿದೆ.
ಮರಳಿ ಅಧಿಕಾರ ಪಡೆಯುವ ತವಕ:ಕ್ಷೇತ್ರದಲ್ಲಿ ಇದುವರೆಗೂ 17 ಲೋಕಸಭೆ ಚುನಾವಣೆಗಳು ನಡೆದಿದ್ದು, 15 ಬಾರಿ ಕಾಂಗ್ರೆಸ್ ಗೆದ್ದಿದೆ. 1952, 1957, 1962ರಲ್ಲಿ ದೊಡ್ಡತಿಮ್ಮಯ್ಯ ಕಾಂಗ್ರೆಸ್​ನಿಂದ ಗೆದ್ದಿದ್ದರು. ಆನಂತರ 1967, 1971, 1977, 1980ರಲ್ಲಿ ಜಿ.ವೈ.ಕೃಷ್ಣನ್ ಪ್ರತಿನಿಧಿಸಿದ್ದರು. 1984ರಲ್ಲಿ ಜನತಾ ಪಕ್ಷದಿಂದ ಬೆಂಗಳೂರಿನ ಡಾ.ವಿ.ವೆಂಕಟೇಶ್ ಗೆದ್ದಿದ್ದರು. 1989ರಲ್ಲಿ ಕಾಂಗ್ರೆಸ್​ನ ವೈ. ರಾಮಕೃಷ್ಣ ಗೆಲುವು ಸಾಧಿಸಿದ್ದರು. ಅನಂತರ 1991, 1996, 1998,1999, 2004, 2009, 2014ರಲ್ಲಿ ಕಾಂಗ್ರೆಸ್​ನಿಂದ ಶಿಡ್ಲಘಟ್ಟ ತಾಲೂಕಿನ ಕಂಬದಹಳ್ಳಿ ಕೆ.ಎಚ್. ಮುನಿಯಪ್ಪ ಸತತವಾಗಿ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2019ರಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ ನೀಡಿದ ಪ್ರಬಲ ಪೈಪೋಟಿಯಿಂದ ಕೆ.ಎಚ್.ಮುನಿಯಪ್ಪ ಪರಾಭವಗೊಂಡರು. ಆ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಸಂಸದರು ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದರು. ಇದೀಗ 18ನೇ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಮರಳಿ ಅಧಿಕಾರ ಪಡೆಯುವ ತವಕದಲ್ಲಿದೆ.
5 ಕಾಂಗ್ರೆಸ್, 3 ಜೆಡಿಎಸ್ ಶಾಸಕರು:ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೂವರು ಜೆಡಿಎಸ್, ಐವರು ಕಾಂಗ್ರೆಸ್ ಶಾಸಕರಿದ್ದಾರೆ. ಪರಾಭವಗೊಂಡಿರುವ ಜೆಡಿಎಸ್ ಅಭ್ಯರ್ಥಿಗಳು ಶೇಕಡವಾರು ಮತ ಪಡೆದುಕೊಂಡಿದ್ದಾರೆ. ಗೆಲುವು ಸುಗಮವಾಗಬಹುದೆಂಬ ನಿರೀಕ್ಷೆಯಲ್ಲಿ ಮೈತ್ರಿ ಅಭ್ಯರ್ಥಿ ಇದ್ದಾರೆ.
ಎಡಗೈ-ಬಲಗೈ ಗೊಂದಲ ಸೃಷ್ಟಿ:ಎಂ. ಮಲ್ಲೇಶ್ ಬಾಬು 2018 ಹಾಗೂ 2023ರಲ್ಲಿ ಬಂಗಾರಪೇಟೆ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದ ಮತಗಳಿಂದ ಪರಾಭವಗೊಂಡಿದ್ದರು. ಈ ಚುನಾವಣೆಯಲ್ಲಿ ಸಿಂಪತಿ ಮತಗಳು ಹೆಚ್ಚು ಲಭಿಸಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರದ ಉಭಯ ಪಕ್ಷಗಳ ಸಮನ್ವಯ ಸಮಿತಿ ಸಭೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಸಭೆಗಳಿಗೆ ಬರುವವರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಕಾಂಗ್ರೆಸ್​ನಲ್ಲಿ ಅಭ್ಯರ್ಥಿ ಅಂತಿಮಗೊಳ್ಳುವ ಮೊದಲು ಎಡಗೈ-ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಎರಡು ಬಣಗಳ ನಡುವೆ ಪೈಪೋಟಿ ನಡೆದಿತ್ತು. ಇದು ದಲಿತ ಸಮುದಾಯಗಳಲ್ಲಿ ಗೊಂದಲ ಸೃಷ್ಟಿಸಿದೆ. ಈ ಸಮುದಾಯಗಳ ಮತದಾರರು ಯಾರಿಗೆ ಒಲವು ತೋರಲಿದ್ದಾರೆ ಎಂದು ಕಾದು ನೋಡಬೇಕಿದೆ.
ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿ ದ್ದೇನೆ. ಹೈಕಮಾಂಡ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿರುವುದು ಜಿಲ್ಲೆಯ ಮುಖಂಡರಿಗೂ ಸಮಾಧಾನ ತಂದಿದೆ. ಗೆಲುವಿಗೆ ಶ್ರಮಿಸುತ್ತಾರೆ ಎಂಬ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳೂ ಗೆಲುವಿಗೆ ಶ್ರೀರಕ್ಷೆ ಆಗಲಿವೆ.
| ಕೆ.ವಿ.ಗೌತಮ್ ಕಾಂಗ್ರೆಸ್ ಅಭ್ಯರ್ಥಿ
ಬಂಗಾರಪೇಟೆ ಜೆಡಿಎಸ್ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ 2 ಸಾವಿರ ಮತಗಳಿಂದ ಪರಾಭವಗೊಂಡಿರುವ ನೋವು ಜನತೆಗೂ ಗೊತ್ತಿದೆ. ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬ ಒತ್ತಾಸೆ ಜನರಲ್ಲಿದೆ. ಇದರಿಂದಾಗಿ ಮತದಾರರು ಆಶೀರ್ವಾದ ಮಾಡಲಿದ್ದಾರೆ.
| ಎಂ.ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿ
ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
