ಉಡುಪಿ:ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ.
ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.
ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಇತ್ತೀಚೆಗೆ ಕೊಡಗಿನಲ್ಲಿ ಯುವತಿಯೊಬ್ಬಳು ಹೀಗೇ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕ ಪೊನ್ನಪ್ಪ (24) ಮೃತ ದುರ್ದೈವಿ. ಕರ್ತವ್ಯಕ್ಕೆಂದು ಮನೆಯಿಂದ ಹೊರಟಾಗ ಹೃದಯ ಬಡಿತವೇ ನಿಂತು ಹೋಗಿದೆ. ಎದೆ ನೋವೆಂದು ಒದ್ದಾಡಿದ ನಿಲಿಕ ಕುಸಿದು ಬಿದ್ದಿದ್ದಳು. ಕೂಡಲೇ ಅಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ವೈದ್ಯರು ದೃಢಪಡಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − five =
Remember me
