ಬೆಂಗಳೂರು:ರಾಜ್ಯದಲ್ಲಿ ಹಿಜಾಬ್​ ವಿವಾದದ ಬೂದಿ ಮುಚ್ಚಿದೆ ಕೆಂಡದಂತಿದೆ. ಇದರ ಜತೆಗೇ ವ್ಯಾಪಾರ ನಿರ್ಬಂಧ, ಹಲಾಲ್​ ಸಮರ ಜೋರಾಗಿದೆ. ಹಲಾಲ್​ ಸಮರದ ಬೆನ್ನಲ್ಲೇ ಜಟ್ಕಾ ಕಟ್​ ಅಭಿಯಾನ ಶುರುವಾಗಿದ್ದು, ರಾಜ್ಯದಲ್ಲಿ ಧರ್ಮ ಸಂಘರ್ಷ ಹೆಚ್ಚಾಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಹಲಾಲ್ ವಿರುದ್ಧ ಅಭಿಯಾನ ವಿಚಾರದಲ್ಲಿ ಸರ್ಕಾರದ ನಿಲುವು ಏನೆಂದು ಮುಂದೆ ತಿಳಿಸುತ್ತೇವೆ ಎಂದಿದ್ದಾರೆ.
ಯಾವುದಕ್ಕೆ ಪ್ರತಿಕ್ರಿಯೆ ಕೊಡಬೇಕೋ ಅದಕ್ಕೆ ಕೊಡುತ್ತೇವೆ‌. ಯಾವುದಕ್ಕೆ ಪ್ರತಿಕ್ರಿಯೆ ಕೊಡಬೇಕು ಕೊಡಬಾರದು ಎಂಬುದೂ ಗೊತ್ತಿದೆ. ಹಲಾಲ್ ವಿರುದ್ಧ ಅಭಿಯಾನ ಈಗಷ್ಟೇ ಆರಂಭವಾಗಿದೆ. ಇದರ ಸಮಗ್ರತೆಯನ್ನು ಗಮನಿಸಬೇಕಾಗುತ್ತದೆ. ಕೆಲವು ನಿಯಮಗಳು, ಆಚರಣೆಗಳು ಮೊದಲಿಂದಲೂ ಇವೆ. ಅದರಂತೆ ನಡೆದುಕೊಂಡು ಹೋಗುತ್ತಿದೆ. ಧಾರ್ಮಿಕ ದತ್ತಿ ಕಾಯ್ದೆ ನಿಯಮದ ಬಗ್ಗೆ ಗಂಭೀರ ಆಕ್ಷೇಪಗಳು ಎದ್ದಿವೆ. ಅದರ ಬಗ್ಗೆ ಅವಲೋಕನ ಮಾಡುತ್ತೇವೆ ಎಂದು ಸಿಎಂ ಹೇಳಿದರು.
ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳುತ್ತಿದ್ದೇವೆ. ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ. ನಮ್ಮ ಸರ್ಕಾರ ಅಭಿವೃದ್ಧಿಯತ್ತ ಮಾತ್ರ ಗಮನ ಕೊಡುತ್ತದೆ. ಬಲಪಂಥೀಯ- ಎಡಪಂಥೀಯ ಅನ್ನೋದು ಇಲ್ಲ. ನಾವು ಶಾಂತಿ, ಸಾಮಾನ್ಯ ಜನರ ಭದ್ರತೆ, ಅಭಿವೃದ್ಧಿಗಳಂಥ ಸಿದ್ಧಾಂತಗಳನ್ನು‌ ನಂಬುತ್ತೇವೆ ಎಂದರು.
ಕ್ಷೀರ ಸಮೃದ್ಧಿ ಬ್ಯಾಂಕ್:ರಾಜ್ಯಕ್ಕೆ ಅಮಿತ್ ಶಾ ಆಗಮಿಸುತ್ತಿದ್ದು, ಕ್ಷೀರ ಸಮೃದ್ಧಿ ಬ್ಯಾಂಕ್ ಲೋಗೋ ಬಿಡುಗಡೆ ಮಾಡಲಿದ್ದಾರೆ. ರಾಜ್ಯದಲ್ಲಿ 26 ಲಕ್ಷ ಹಾಲು ಉತ್ಪಾದಕ ರೈತರಿದ್ದಾರೆ‌. 14,900 ಹಾಲು ಸಹಕಾರ ಸಂಘಗಳು, 15 ಹಾಲು ಒಕ್ಕೂಟಗಳಿವೆ. ರೈತರ ಆದಾಯ ದ್ವಿಗುಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ

ತಾಯಿಗೆ ದೇಗುಲ ಕಟ್ಟಿದ ಮಕ್ಕಳು! ನಿತ್ಯ ಪೂಜೆ, ಅಮ್ಮನಿಗಾಗಿ ಹಂಬಲಿಸುತ್ತಿದೆ ಮನ… ವಿಜಯಪುರದಲ್ಲಿ ಮನಮಿಡಿಯುವ ದೃಶ್ಯ

ಬಡವರು ಮೇಕೆಯಂತೆ ಶ್ರೀಮಂತರು ಹಂದಿಯಂತೆ!

No tags
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
