ಬೆಂಗಳೂರು:ದಯವಿಟ್ಟು ಶಿವಮೊಗ್ಗದ ಜನತೆ ಯಾವುದೇ ಉದ್ವೇಗ, ಪ್ರಚೋದನೆಗೆ ಒಳಗಾಗದೇ ಶಾಂತಿ ಕಾಪಾಡಬೇಕು. ನಿನ್ನೆ(ಭಾನುವಾರ) ರಾತ್ರಿ ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾಗಿರುವುದು ಮನಸ್ಸಿಗೆ ಬೇಸರವಾಗಿದೆ. ತನಿಖೆ ಈಗಾಗಲೇ ಪ್ರಾರಂಭವಾಗಿದ್ದು, ಆರೋಪಿಗಳ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಆರೋಪಿಗಳನ್ನ ಬಂಧಿಸಲಾಗುವುದು. ಎಲ್ಲರೂ ಶಾಂತಿ-ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಶಿವಮೊಗ್ಗ ಜನತೆಯೂ ಸಹಕರಿಸಬೇಕು. ಹರ್ಷ ಅವರ ಹತ್ಯೆ ಕೇಸ್​ ಅನ್ನು ನ್ಯಾಯಸಮ್ಮತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಅವರನ್ನು ಭೇಟಿಯಾದ ಡಿಜಿಪಿ ಪ್ರವೀಣ್​ ಸೂದ್​ ಅವರಿಗೆ ಆರೋಪಿಗಳನ್ನು ಯಾವುದೇ ಮುಲಾಜಿಲ್ಲದೆ ಬಂಧಿಸಿ. ಪರಿಸ್ಥಿತಿಯನ್ನು ಹತೋಟಿಗೆ ತರಲು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಂದೋಬಸ್ತ್​ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಅಂತಿಮ ಯಾತ್ರೆ ವೇಳೆ ಬೈಕ್​ಗೆ ಬೆಂಕಿ, ಮನೆಗಳಿಗೆ ಕಲ್ಲು ತೂರಾಟ

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ: ಮಂಗಳೂರಲ್ಲಿ ಹೈ ಅಲರ್ಟ್​

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ: ಆರೋಪಿಗಳ ಸುಳಿವು ಸಿಕ್ಕಿದೆ, ಶಿಕ್ಷೆ ಕೊಡಿಸುತ್ತೇವೆ ಎಂದ ಗೃಹ ಸಚಿವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + three =
Remember me
