ಬೆಂಗಳೂರು:ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಆ‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಇ.ಡಿ. ವಿಚಾರಣೆ ಎದುರಿಸುತ್ತಿದ್ದಾರೆ. ಮಾಜಿ ಅಧ್ಯಕ್ಷ ಇ.ಡಿ. ವಿಚಾರಣೆಗೆ ಒಳಗಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಆಗಾಗ್ಗೆ ವಿಚಾರಣೆ, ಕೋರ್ಟ್​ಗೆ ಹೋಗಿ ಬರುತ್ತಿದ್ದಾರೆ. ತಮ್ಮ ಭ್ರಷ್ಟತನ‌ ಮುಚ್ಚಿಕೊಳ್ಳಲು‌ ಬಿಜೆಪಿ ಸರ್ಕಾರದ ಮೇಲೆ‌ ಆಧಾರರಹಿತ ಭ್ರಷ್ಟಾಚಾರ ಆರೋಪ ಹೊರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಿಡಿಕಾರಿದರು.
ದೊಡ್ಡಬಳ್ಳಾಪುರದಲ್ಲಿ ರಾಜ್ಯ ಬಿಜೆಪಿ ಗುರುವಾರ ಹಮ್ಮಿಕೊಂಡಿರುವ ಜನೋತ್ಸವವನ್ನು ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರೋತ್ಸವ ಎಂದು ಅಣಕವಾಡಿರುವುದಕ್ಕೆ ಸಿಎಂ ಬೊಮ್ಮಾಯಿ‌ ಆರ್​.ಟಿ. ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ‌ ಪ್ರತಿಕ್ರಿಯಿಸಿದರು.
ಈ‌ ಹಿಂದೆ ಐದು ವರ್ಷಗಳ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಎಸಗಿದ್ದಕ್ಕಾಗಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ತಕ್ಕಪಾಠ ಕಲಿಸಿದರು. ಆದರೂ ಕಾಂಗ್ರೆಸ್​ಗೆ ಬುದ್ಧಿ ಬಂದಂತಿಲ್ಲ. ಮುಂದಿನ‌ ಚುನಾವಣೆಯಲ್ಲೂ‌ ಜನರು‌ ಮತ್ತೊಮ್ಮೆ ಸೋಲಿಸಿ ಮೂಲೆಗೆ ಸೇರಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹುರುಳಿಲ್ಲದ ಭ್ರಷ್ಟಾಚಾರ ಆರೋಪ ಹೊರಿಸಿವುದು ಅರ್ಥಹೀನ. ನಿರ್ದಿಷ್ಟ ಪ್ರಕರಣಗಳ ಬಗ್ಗೆ ಮಾಹಿತಿ ನೀಡಲಿ. ತನಿಖೆ ನಡೆಸಿ ಕ್ರಮವಹಿಸಿ ಕ್ರಮವಹಿಸಲು ಸಿದ್ಧವೆಂದು ಸಿಎಂ ಬೊಮ್ಮಾಯಿ‌ ಸವಾಲೆಸೆದರು.
ಮಧುಚಂದ್ರಕ್ಕೆ ಹೋಗಬೇಕಿದ್ದ ನವವಿವಾಹಿತ ಆಸ್ಪತ್ರೆಗೆ… ತಡರಾತ್ರಿ ಕುಸಿದುಬಿದ್ದ ಮನೆಯ ಗೋಡೆ, ಛಾವಣಿ…

ನಾನು 5 ಸ್ಟಾರ್​ ಹೋಟೆಲ್​ನ ಸೌಲಭ್ಯ ಕೇಳಿಲ್ಲ, ಆಸ್ಪತ್ರೆಯಲ್ಲಿ ಮೂಲಭೂತ ಸವಲತ್ತು ಬೇಕಲ್ಲವೇ: ನವ್ಯಶ್ರೀ

ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
