ಬೆಂಗಳೂರು:ಕರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ವೈರಾಣು ನಿಯಂತ್ರಣಕ್ಕಾಗಿ ನಿರ್ಬಂಧಗಳನ್ನು ಜಾರಿಗೊಳಿಸಿ ತಿಂಗಳು ಕಳೆದಿದೆ. ಪರಿಸ್ಥಿತಿ ಅವಲೋಕಿಸಿ ಕರೊನಾ ನಿರ್ವಹಣೆಗಾಗಿ ಕೆಲವು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದರು.
ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಂದಿನ ನಡೆ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳುವ ಉದ್ದೇಶದಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು(ಶನಿವಾರ) ಮಧ್ಯಾಹ್ನ ಸಭೆ ಕರೆದಿರುವೆ ಎಂದರು.
ವಸ್ತುಸ್ಥಿತಿ ಪರಾಮರ್ಶಿಸಿ ವರದಿ ಸಲ್ಲಿಸಲು ತಜ್ಞರಿಗೆ ಕೇಳಿಕೊಳ್ಳಲಾಗಿದೆ. ಕರೊನಾ ಬೆಳವಣಿಗೆ, ಬೆಂಗಳೂರು ಹಾಗೂ ಉಳಿದ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮೇಲೆ ಸರ್ಕಾರ ನಿಗಾವಹಿಸಿ, ಜನರ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮವಹಿಸಿದೆ ಎಂದು ಸಿಎಂ ತಿಳಿಸಿದರು.
ನಿರ್ಬಂಧಗಳನ್ನು ಸಡಿಲಗೊಳಿಸಬೇಕು, ಬೆಂಗಳೂರಿನಲ್ಲಿ ಶಾಲೆಗಳ ಪುನರಾರಂಭದ ಬೇಡಿಕೆಗಳಿವೆ. ಸೋಂಕಿನ ಬೆಳವಣಿಗೆ ಗಮನಕ್ಕಿದ್ದು, ಸಚಿವರು, ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆಗೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬದಲಾಗುವುದು ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 12 =
Remember me
