ಯಾದಗಿರಿ:ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತಕ್ಕೆ ಕಾರಣವೇನು ಎಂಬುದನ್ನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಯಾದಗಿರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಅಪಘಾತ ನಡೆದ ಸ್ಥಳಕ್ಕೆ ನಮ್ಮ ಅಧಿಕಾರಿಗಳು ತೆರಳಿದ್ದಾರೆ. ಸಂಪೂರ್ಣ ಮಾಹಿತಿ ಬಂದ ನಂತರ ಮಾತನಾಡುವೆ ಎಂದರು. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಎಸ್​ಪಿ ಭೇಟಿ ನೀಡಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಪಾವಗಡ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಕೇಂದ್ರ ಸಚಿವ ನಾರಾಯಣಸ್ವಾಮಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಶಾಸಕ ವೆಂಕಟರಮಣಪ್ಪ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಅಗತ್ಯ ಚಿಕಿತ್ಸಾ ವ್ಯವಸ್ಥೆ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಎಸ್​ವಿಟಿ ಹೆಸರಿನ ಖಾಸಗಿ ಬಸ್​ ಅಪಘಾತಕ್ಕೀಡಾಗುತ್ತಿದ್ದಂತೆ ಚಾಲಕ ರಘು, ನಿರ್ವಾಹಕ ಮುರಳಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮೃತರ ಪೈಕಿ ಪೋತಗಾನಹಳ್ಳಿ ಅಮೂಲ್ಯ(20), ಸೂಲನಾಯಕನಹಳ್ಳಿ ಅಜಿತ್ ಕುಮಾರ್ (22), ಬೆಸ್ತರಹಳ್ಳಿ ಸನಾವುಲ್ಲಾ(18) ಹಾಗೂ ವೈ.ಎನ್.ಹೊಸಕೋಟೆಯ ಕಲ್ಯಾಣ್ ಕುಮಾರ್ (22) ಎಂದು ಗುರುತು ಸಿಕ್ಕಿದೆ. ಸಾವು-ನೋವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಪಾವಗಡ ವ್ಯಾಪ್ತಿ ಎಲ್ಲ ಖಾಸಗಿ ಬಸ್‌ಗಳ ಪರವಾನಗಿ ರದ್ದು: 5 ಮಂದಿ ಸಾವಿನ ಬಳಿಕ ಎಚ್ಚೆತ್ತ ಸಾರಿಗೆ ಸಚಿವ

ಪಾವಗಡದಲ್ಲಿ ಭೀಕರ ಅಪಘಾತ: 5ಕ್ಕೇರಿದ ಸಾವಿನ ಸಂಖ್ಯೆ, ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು

ಪೇದೆ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್: ಇಬ್ಬರು ಪತ್ರಕರ್ತರು, ASI ವಿರುದ್ಧ ಎಫ್​ಐಆರ್​! ಡೆತ್​ನೋಟಲ್ಲಿದೆ ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 9 =
Remember me
