ಬೆಂಗಳೂರು:ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.
‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಪ್ರಯುಕ್ತ ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್’ಗೆ ಚಾಲನೆ ನೀಡಿದ ಸಿಎಂ, 2020ನೇ ಸಾಲಿನ ‘ಏಕಲವ್ಯ’, ‘ಜೀವಮಾನ ಸಾಧನೆ’, ‘ಕರ್ನಾಟಕ ಕ್ರೀಡಾರತ್ನ’ ಹಾಗೂ 2021-22ನೇ ಸಾಲಿನ ‘ಕ್ರೀಡಾ ಪೋಷಕ ಪ್ರಶಸ್ತಿ’ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಸಿಎಂ, ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಗುರಿ ರಾಜ್ಯ ಸರ್ಕಾರಕ್ಕಿದೆ. ಅದಕ್ಕಾಗಿ ಕ್ರೀಡಾ ಕ್ಷೇತ್ರದಲ್ಲಿನ ಸಾಧಕರಿಗೆ ವಿಶೇಷ ಸೌಲಭ್ಯ ನೀಡುವ ಜತೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಪ್ಯಾರೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಗ್ರಾಮೀಣ ಮಟ್ಟದಲ್ಲೂ ಕ್ರೀಡೆಗೆ ಪ್ರೋತ್ಸಾಹಿಸಲು ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸಲು ಗ್ರಾಮೀಣ ಕ್ರೀಡಾಕೂಟ ಪ್ರಾರಂಭಿಸಲಾಗಿದೆ. ಕಬ್ಬಡಿ, ಖೋಖೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ… ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತವೆ. ಗ್ರಾಪಂ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳನ್ನು ನಡೆಸುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗುತ್ತಿದೆ ಎಂದರು.

ಕ್ರೀಡಾ ಕರ್ನಾಟಕವನ್ನಾಗಿಸುವ ಗುರಿ:ಕರ್ನಾಟಕದ ಯುವಜನತೆ ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸಿನ ಉತ್ತುಂಗಕ್ಕೇರಬೇಕು. ಸೀನಿಯರ್ ಒಲಿಂಪಿಕ್ಸ್ ಏರ್ಪಡಿಸಲು ರಾಜ್ಯ ಸರ್ಕಾರ 8 ಕೋಟಿ ರೂ. ನೀಡಿದೆ. ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಗುರಿ ರಾಜ್ಯ ಸರ್ಕಾರಕ್ಕಿದೆ. ಕ್ರೀಡೆಯ ತರಬೇತುದಾರರಿಗೆ ಎಲ್ಲ ಸಹಕಾರ ನೀಡಲಾಗುವುದು. ಕರಾವಳಿಯ ಕಂಬಳ, ಉತ್ತರ ಕರ್ನಾಟಕದ ಚಕ್ಕಡಿ ಹೊಡೆಯುವ ಸ್ಪರ್ಧೆ, ಕುಸ್ತಿ, ಸೈಕಲ್, ಮೋಟರ್ ಸೈಕಲ್, ಕಾರು ರ‍್ಯಾಲಿ, ಗಾಲ್ಫ್, ವಾಲಿಬಾಲ್ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.
ದೃಢ ನಿಶ್ಚಯ ಬೇಕು:ಯುವಕರಲ್ಲಿ ಶಿಸ್ತು ಮತ್ತು ವ್ಯಕ್ತಿತ್ವದಿಂದ ಯಶಸ್ಸು ಬರುತ್ತದೆ. ಕಠಿಣ ಪರಿಶ್ರಮ ಇದ್ದರೆ ಗುರಿ ಮುಟ್ಟಬಹುದು. ಗೆಲ್ಲಬೇಕೆಂಬ ಹುರುಪಿನಿಂದ ಸಕಾರಾತ್ಮಕವಾಗಿ, ಆತ್ಮವಿಶ್ವಾಸದಿಂದ ಆಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಯಶ ಸಾಧಿಸಲು ಮೊದಲು ದೃಢ ನಿಶ್ಚಯ, ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಯುವಕರಿಗೆ ಕಿವಿಮಾತು ಹೇಳಿದರು.
ನೀರಿನಲ್ಲಿ ಮುಳುಗುತ್ತಿದ್ದ ಬಸ್​, 50 ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯ ಯುವಕರು! ರಾಮನಗರದಲ್ಲಿ ತಪ್ಪಿದ ಅನಾಹುತ

ಮದ್ವೆ ನಡೆಯುತ್ತಿರುವಾಗಲೇ ಕಲ್ಯಾಣ ಮಂಟಪಕ್ಕೆ ನುಗ್ಗಿದ ಮಳೆ ನೀರು! ಚಾಮರಾಜನಗರದಲ್ಲಿ ಕೆಲ ಗ್ರಾಮಗಳು ಜಲಾವೃತ

ಕಾರಿನ ಮೇಲೆ ಆಲದ ಮರ ಬಿದ್ದು ಓರ್ವ ಸಾವು: ಅರ್ಕಾವತಿ ನದಿ ನೀರಲ್ಲಿ ಕೊಚ್ಚಿಹೋದ ಹಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 2 =
Remember me
