ಬೆಂಗಳೂರು:ವಿಧಾನ ಮಂಡಲ ಅಧಿವೇಶನ ಮುಗಿದಿದೆ. ವರಿಷ್ಠರ ಜತೆಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಿಸುವ ಮೂಲಕ ಖಾಲಿಯಿರುವ ಆರು ಸ್ಥಾನಗಳನ್ನು ತುಂಬಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅಧಿವೇಶನದ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಧಿವೇಶನ ಮುಗಿಯಲೆಂದು ಕಾಯುತ್ತಿದ್ದೆ. ವರಿಷ್ಠರ ಸೂಚನೆಯಂತೆ ಸಂಪುಟಕ್ಕೆ ಸೇರಿಸಿಕೊಳ್ಳುವವರ ಪಟ್ಟಿ ಕಳುಹಿಸುವೆ ಅಥವಾ ದೆಹಲಿಗೆ ತೆರಳಿ ಖುದ್ದು ಮಾತುಕತೆ ನಡೆಸಿ ಒಪ್ಪಿಗೆ ಪಡೆಯುವೆ ಎಂದರು.
ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡದ ಕಾರಣಕ್ಕೆ ಕೆಲವು ಆಕಾಂಕ್ಷಿಗಳು ವಿಧಾನ ಮಂಡಲದ ಅಧಿವೇಶನಕ್ಕೆ ಗೈರಾದರೆ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಹಾಗೇನಿಲ್ಲ ಎಂದು ಚುಟುಕಾಗಿ ಉತ್ತರಿಸಿದರು.
ತನಿಖೆಗೆ ಈಗಲೂ ಸಿದ್ಧ: ಗುತ್ತಿಗೆದಾರರ ಸಂಘದವರಿಗೆ ಈಗಲೂ ಹೇಳುವೆ. 40 ಪರ್ಸೆಂಟ್ ಕಮಿಷನ್ ಆರೋಪದ ಬಗ್ಗೆ ದೂರು ಅಥವಾ ಸಣ್ಣ ಪುರಾವೆ ಕೊಡಿ, ತಕ್ಷಣ ಲೋಕಾಯುಕ್ತ ತನಿಖೆಗೆ ಒಪ್ಪಿಸುವೆ ಎಂದು ಸಿಎಂ ಬೊಮ್ಮಾಯಿ ಪುನರುಚ್ಚರಿಸಿದರು.
ಕಾಂಗ್ರೆಸ್‌ನವರು ಸುಳ್ಳನ್ನು ಪದೇ ಪದೆ ಹೇಳಿ ಸತ್ಯ ಮಾಡಲು ಹೊರಟಿದ್ದಾರೆ. ಅಂತಹ ಆಟಗಳು ಜನರ ಮುಂದೆ ನಡೆಯುವುದಿಲ್ಲ. ಸಿದ್ದರಾಮಯ್ಯ ನೇತೃತ್ವದ ಆಡಳಿತಾವಧಿಯಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಅಸಂಖ್ಯವಾಗಿದ್ದು, ಯಾವುದೇ ನಡೆಸಲಿಲ್ಲ. ಅಂತಹವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಸಿಎಂ ತಿರುಗೇಟು ನೀಡಿದರು.
ಬಡತನ ಮೆಟ್ಟಿ ನಿಲ್ಲಬೇಕು ಅನ್ನುವಷ್ಟರಲ್ಲಿ ಆಟವಾಡಿದ ವಿಧಿ… ಸಾವಲ್ಲೂ ಸಾರ್ಥಕತೆ ಮೆರದ ಪಿಯು ವಿದ್ಯಾರ್ಥಿನಿ…

ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರೇ ಎಐಸಿಸಿ ಅಧ್ಯಕ್ಷರಾಗಬೇಕು: ಮಲ್ಲಿಕಾರ್ಜುನ ಖರ್ಗೆ

Unavailable on free accounts.Upgradeto redirect links.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
